ಅ. 4: ಮಣಿಪಾಲದಲ್ಲಿ ಅಂತರಾಷ್ಟ್ರೀಯ ಮಟ್ಟದ ಇ-ಪೋಸ್ಟರ್ ಸಮ್ಮೇಳನ
ಉಡುಪಿ: ವಿದ್ಯಾರ್ಥಿಗಳಲ್ಲಿ ಸಂಶೋಧನಾ ಪ್ರವೃತ್ತಿಯನ್ನು ಬೆಳೆಸುವ ನಿಟ್ಟಿನಿಂದ ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ)ಯ ವಾಣಿಜ್ಯ ವಿಭಾಗದ ವತಿಯಿಂದ ಅ.4ರಂದು ಮಣಿಪಾಲ ಕೆಎಂಸಿಯ ಡಾ. ಟಿಎಂಎ ಪೈ ಹಾಲ್‌ನಲ್ಲಿ ಒಂದು ದಿನದ ಅಂತರರಾಷ್ಟ್ರೀಯ ಮಟ್ಟದ ಇ–ಪೋಸ್ಟರ್ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಮಾಹೆಯ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಅಂಕಿತಾ ಶೆಟ್ಟಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಸಮ್ಮೇಳನವು ಆಡಳಿತ ನಿರ್ವಹಣೆ, ವಾಣಿಜ್ಯ, ಆರೋಗ್ಯ ನಿರ್ವಹಣೆ, ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ, ವ್ಯವಹಾರ ವಿಶ್ಲೇಷಣೆ ಮುಂತಾದ ವಿಚಾರಗಳನ್ನು ಮಂಡಿಸಲು […]