ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಇಂದಿನಿಂದ ಕೋವಿಡ್-19 ಪರೀಕ್ಷೆ ಆರಂಭ

ಮಣಿಪಾಲ: ಇಲ್ಲಿನ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಇಂದಿನಿಂದ ಕೋವಿಡ್ -19 ರ ಪರೀಕ್ಷೆ ಆರಂಭಿಸಲಾಗಿದೆ ಎಂದು ಆಸ್ಪತ್ರೆಯವ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ತಿಳಿಸಿದ್ದಾರೆ. ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಗೆ “ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐ ಸಿ ಎಂ ಆರ್)”ಯಿಂದ ಕೋವಿಡ್ 19 ಪರೀಕ್ಷೆಗೆ ಅನುಮೋದನೆ ದೊರೆತಿದೆ. ಇದರಿಂದ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಪ್ರಯೋಗಾಲಯವು ಉಡುಪಿ ಜಿಲ್ಲೆಯಲ್ಲಿ ಸರಕಾರಿ ಅಥವಾ ಖಾಸಗಿ ವಲಯದಲ್ಲಿ ಕೋವಿಡ್ 19 ಪರೀಕ್ಷೆಗೆ ಅನುಮೋದನೆ ಪಡೆದ ಮೊದಲ ಆಸ್ಪತ್ರೆಯಾಗಿದೆ ಎಂದಿದ್ದಾರೆ. […]