ಮಣಿಪಾಲದಲ್ಲಿ 4ನೇ ಆವೃತ್ತಿಯ ಕಸ್ತೂರ್ಬಾ ಆಸ್ಪತ್ರೆ ಕಾರ್ಪೊರೇಟ್ ಕ್ರಿಕೆಟ್ ಲೀಗ್ (KH-CCL) 2025 ಉದ್ಘಾಟನೆ.

ಮಣಿಪಾಲ, ಜ.17: ಬಹು ನಿರೀಕ್ಷಿತ 4ನೇ ಆವೃತ್ತಿಯ ಕಸ್ತೂರ್ಬಾ ಹಾಸ್ಪಿಟಲ್ ಕಾರ್ಪೊರೇಟ್ ಕ್ರಿಕೆಟ್ ಲೀಗ್ (KH-CCL) 2024 ಅನ್ನು ಮಣಿಪಾಲದಲ್ಲಿ ಬಹಳ ಉತ್ಸಾಹದಿಂದ ಉದ್ಘಾಟಿಸಲಾಯಿತು. ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಆಯೋಜಿಸಿರುವ ಮೂರು ದಿನಗಳ ಕ್ರಿಕೆಟ್ ಸಂಭ್ರಮದಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳ ಕಾರ್ಪೊರೇಟ್ ಕಂಪನಿಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು ಮತ್ತು ಮಾಧ್ಯಮ ಸಂಸ್ಥೆಗಳನ್ನು ಪ್ರತಿನಿಧಿಸುವ 24 ತಂಡಗಳು ಭಾಗವಹಿಸಲಿವೆ. ಮಣಿಪಾಲ ಎಂಡ್ ಪಾಯಿಂಟ್ ಮೈದಾನದಲ್ಲಿ ಉದ್ಘಾಟನಾ ಸಮಾರಂಭ ನಡೆದಿದ್ದು, ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಮತ್ತು ಉಪ […]