ಮಣಿಪಾಲ ಮಾಹೆಗೆ ಕರ್ನಾಟಕ ರಾಜ್ಯ ಗೃಹ ಸಚಿವ ಪರಮೇಶ್ವರ್ ಭೇಟಿ

ಮಣಿಪಾಲ: ಅಂತರಾಷ್ಟ್ರೀಯ ಶೈಕ್ಷಣಿಕ ವ್ಯವಸ್ಥೆಯಲ್ಲಿ ಮಹತ್ವದ ಸ್ಥಾನ ಪಡೆದಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ಗೆ ಶನಿವಾರ ಕರ್ನಾಟಕ ರಾಜ್ಯ ಗೃಹ ಸಚಿವ ಡಾಜಿ ಪರಮೇಶ್ವರ್ ಅವರು ಭೇಟಿ ನೀಡಿದರು. ಮಣಿಪಾಲಕ್ಕೆ ಅವರ ಅಧಿಕೃತ ಭೇಟಿಯ ಸಂದರ್ಭದಲ್ಲಿ ಅವರು ಮಾಹೆಗೆಆಗಮಿಸಿದರು. ಡಾ. ಜಿ. ಪರಮೇಶ್ವರರವರು ಮಾಹೆಯ ದೀರ್ಘಕಾಲದ ಪರಂಪರೆ ಹಾಗೂ ಶಿಕ್ಷಣ, ಆರೋಗ್ಯ ವಿಜ್ಞಾನ, ತಂತ್ರಜ್ಞಾನ ಮತ್ತು ನವೀನತೆ ಕ್ಷೇತ್ರಗಳಲ್ಲಿ ಕಾಪಾಡಿಕೊಂಡಿರುವ ಉನ್ನತ ಮಟ್ಟದ ಮಾನದಂಡಗಳನ್ನು ಪ್ರಶಂಸಿಸಿದರು. ಸಂಸ್ಥೆಯ ಹಿರಿಯ ಅಧಿಕಾರಿಗಳು […]