ಮಣಿಪಾಲ: ವಿಪರೀತ ಸಾಲ ಮಾಡಿಕೊಂಡಿದ್ದ ವ್ಯಕ್ತಿ ಆತ್ಮಹತ್ಯೆ

ಮಣಿಪಾಲ: ಸಾಲ ತೀರಿಸಲಾಗದ ಚಿಂತೆಯಲ್ಲಿದ್ದ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ತಾಲೂಕಿನ ಹೆರ್ಗಾ ಗ್ರಾಮದ ಕೊಡಂಗೆ ಎಂಬಲ್ಲಿ ಗುರುವಾರ ನಡೆದಿದೆ. ಮೃತರನ್ನು ಹೆರ್ಗಾ ಗ್ರಾಮದ ಕೊಡಂಗೆ ನಿವಾಸಿ ಯಶೋಧರ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರು ಬ್ಯಾಂಕ್, ಪೈನಾನ್ಸ್ ಮತ್ತು ಇತರೆ ಕೈ ಸಾಲ ಮಾಡಿಕೊಂಡಿದ್ದರು. ಆದರೆ ಸಾಲ ತೀರಿಸಲು ಅಸಾಧ್ಯವಾಗಿದ್ದು, ಇದೇ ಚಿಂತೆಯಲ್ಲಿದ್ದ ಯಶೋಧರ್ ಅವರು ಗುರುವಾರ ಬೆಳಿಗ್ಗೆ 7:30ರ ಸುಮಾರಿಗೆ ಮನೆಯ ಅಡುಗೆ ಕೋಣೆಯ ಮರದ ಜಂತಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. […]