ಮಣಿಪಾಲ: ತಾಯಿಯ ಕತ್ತು ಹಿಸುಕಿ ಕೊಂದ ಮಗ: ಆರೋಪಿಯ ಬಂಧನ

ಉಡುಪಿ: ಹಣಕ್ಕಾಗಿ ಮಗನೋರ್ವ ಹೆತ್ತ ತಾಯಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪದ್ಮಾಬಾಯಿ(45) ಕೊಲೆಯಾದ ಮಹಿಳೆ‌. ಮೃತರ ಮಗ ಈಶ ನಾಯಕ್(26) ಕೊಲೆ ಆರೋಪಿ. ಜೂ.18ರಂದು ರಾತ್ರಿ ಪದ್ಮಾಬಾಯಿ ಸೊಂಟ ನೋವಿನಿಂದ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅಂದು ರಾತ್ರಿ ಪದ್ಮಾಬಾಯಿ ಅವರ ತಂಗಿ ಶಿಲ್ಪಾ ಎಂಬವರಿಗೆ ಕರೆ ಮಾಡಿದ ಈಶ ನಾಯಕ್, ತಾಯಿಗೆ ಸೌಖ್ಯವಿಲ್ಲ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಹಣ ಕಳುಹಿಸುವಂತೆ ತಿಳಿಸಿದ್ದನು. ಅದರಂತೆ ಶಿಲ್ಪಾ ಆನ್ಲೈನ್ […]