ಮಣಿಪಾಲ: ಹಣಕಾಸು ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯ ಮೃತದೇಹ ಕೊಳತೆ ಸ್ಥಿತಿಯಲ್ಲಿ ಪತ್ತೆ!

ಉಡುಪಿ: ಮಣಿಪಾಲ ರಾಹುಲ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ಕೊಳತೆ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.ಮೃತವ್ಯಕ್ತಿಯನ್ನು ಆರ್. ಸೆಲ್ವರಾಜ್ ಎಂದು ಗುರುತಿಸಲಾಗಿದೆ. ಇವರು ಹಣಕಾಸು ವ್ಯವಹಾರ ನಡೆಸುತ್ತಿದ್ದು, ರಾಹುಲ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದರು ಎನ್ನಲಾಗಿದೆ. ಇವರು ಬೆಡ್ ನಲ್ಲಿ ಮಲಗಿದ ಸ್ಥಿತಿಯಲ್ಲೇ ಮೃತಪಟ್ಟಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಬಂದ ಮಣಿಪಾಲ ಪೋಲಿಸ್ ಠಾಣೆಯ ಎಎಸ್ ಐ ವಿಜಯ್, ಸಿಬ್ಬಂದಿ ಶಶಿಧರ್, ಸುರೇಶ್ ಶೆಟ್ಟಿ ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ […]