ಮಣಿಪಾಲ: ಗೌರಿಗೆ ಸೀಮಂತದ ಸಂಭ್ರಮ
ಮಣಿಪಾಲ: ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ಹಾಗೂ ಹೊಸಬೆಳಕು ಸೇವಾ ಟ್ರಸ್ಟ್ ಸಹಯೋಗದಲ್ಲಿ ಹೊಸಬೆಳಕು ಆಶ್ರಮದಲ್ಲಿ ಆಶ್ರಯ ಪಡೆದಿರುವ ಗೌರಿ ಹಸುವಿಗೆ ಸೀಮಂತ ಶಾಸ್ತ್ರ ಕಾರ್ಯಕ್ರಮ ಬುಧವಾರ ನಡೆಯಿತು. ಬಲು ಅಪರೂಪವಾಗಿ ನಡೆದಿರುವ, ಗೋವಿಗೆ ಬಯಕೆ ಇಡೆರಿಸುವ ಕಾರ್ಯಕ್ರಮವು ಗೋಪ್ರೇಮಕ್ಕೆ ಸಾಕ್ಷಿಯಾಯಿತು. ಗೌರಿಯನ್ನು ಸ್ನಾನ ಮಾಡಿಸಿದ ಬಳಿಕ, ಅಲಂಕಾರಗೊಳಿಸಿದ ನಡಿಗೆ ಯಂತ್ರದ ಸಹಾಯದಿಂದ ಮಂಟಪಕ್ಕೆ ಕರೆತರಲಾಯಿತು. ಗೌರಿ ಹಸುವಿಗೆ ಹಸಿರು ಬಣ್ಣದ ಸೀರೆ ಉಡಿಸಲಾಯಿತು. ರವಿಕೆ ಕಣ, ಅಕ್ಕಿ, ತೆಂಗಿನಕಾಯಿ ಮೊದಲಾದ ಸಾಮಗ್ರಿಗಳೊಂದಿಗೆ ಮಡಿಲು ತುಂಬಿಸಲಾಯಿತು. […]