ಮಣಿಪಾಲ: ಸೆ.12ರಂದು ಬೌದ್ಧಿಕ ವಿಕಲಚೇತನರ ಕೌಶಲಾಭಿವೃದ್ಧಿ ತರಬೇತಿ ಕೇಂದ್ರ ಉದ್ಘಾಟನೆ

ಉಡುಪಿ: ಉಡುಪಿ ಜಿಲ್ಲಾ ವಿಶೇಷ ಮಕ್ಕಳ ಪೋಷಕರ ಸಂಘದ ಆಶ್ರಯದಲ್ಲಿ ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದಲ್ಲಿ ಆರಂಭಿಸಿರುವ “ಬೌದ್ಧಿಕ ವಿಕಲಚೇತನರ ಕೌಶಲಾಭಿವೃದ್ಧಿ ತರಬೇತಿ ಕೇಂದ್ರದ ಉದ್ಘಾಟನೆ ಇದೇ ಸೆ.12ರಂದು ಬೆಳಿಗ್ಗೆ 9.30ಕ್ಕೆ ನಡೆಯಲಿದೆ ಎಂದು ಉಡುಪಿ ಜಿಲ್ಲಾ ವಿಶೇಷ ಮಕ್ಕಳ ಪೋಷಕರ ಸಂಘದ ಅಧ್ಯಕ್ಷ ಕೆ.ಎಸ್. ಜೈ ವಿಠಲ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೂತನ ತರಬೇತಿ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಉಡುಪಿ ಶಾಸಕ ಯಶ್ ಪಾಲ್ […]