ಮಣಿಪಾಲ: ಕಾಲೇಜಿನಲ್ಲೇ ವಿದ್ಯಾರ್ಥಿಗಳ ನಡುವೆ ಜಗಳ; ಮೂವರ ಬಂಧನ

ಉಡುಪಿ: ಮಣಿಪಾಲದ ಪ್ರತಿಷ್ಠಿತ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳ ನಡುವೆ ಜಗಳ ನಡೆದು ಒಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೆಪ್ಟೆಂಬರ್ 18ರಂದು ಬೆಳಿಗ್ಗೆ ನಡೆದಿದೆ. ವಿದ್ಯಾರ್ಥಿ ರಾಜ್ ಗಿರೀಶ್ ಸುವರ್ಣ ಹಾಗೂ ಅವನ ಸ್ನೇಹಿತ ಸಾತ್ವಿಕ್ ಭಂಡಾರಿ ತರಗತಿಯಲ್ಲಿ ಇದ್ದ ಸಂದರ್ಭದಲ್ಲಿ ಆರೋಪಿಗಳಾದ ರಾಜ್ ವೀರ್ ಸಿಂಗ್, ವಿಕ್ರಮ್ ಸಿಂಗ್ ಹಾಗೂ ಕ್ರಿಶ್ ಶಾಹ್ ಮಾಲಾವ್ ಅವರು ತರಗತಿಗೆ ಬಂದು ಅವಾಚ್ಯ ಶಬ್ದಗಳಿಂದ ಬೈದು, ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ದಾಳಿಯಲ್ಲಿ ಸಾತ್ವಿಕ್ ಭಂಡಾರಿ ಎಡ […]