ಮಣಿಪಾಲ: ಯುವತಿ ಆತ್ಮಹತ್ಯೆ

ಮಣಿಪಾಲ: ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಮಣಿಪಾಲದಲ್ಲಿ ವ್ಯಾಸಂಗ ಮಾಡುತ್ತಿದ್ದ ಅನ್ಯ ಜಿಲ್ಲೆಯ ವಿದ್ಯಾರ್ಥಿನಿ ಪೌಲಾ ಲೆಸ್ಲಿಯ ವರ್ಜಾರಿ (19) ಮೃತಪಟ್ಟವರು. ಮೊಬೈಲ್‌ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಗಾಬರಿಗೊಂಡ ಆಕೆಯ ತಂದೆಯು ತಾಯಿಯ ಬಳಿ ಈ ಬಗ್ಗೆ ಪರಿಶೀಲಿಸುವಂತೆ ಸೂಚಿಸಿದ್ದರು. ಆಕೆಯ ಕೊಠಡಿ ಬಾಗಿಲಿಗೆ ಬೀಗ ಹಾಕಲಾಗಿತ್ತು. ತೆರೆದು ನೋಡಿದಾಗ ಆಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಕಾರಣ ತಿಳಿದುಬಂದಿಲ್ಲ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.