ಮಣಿಪಾಲ ಟೈಗರ್ ಸರ್ಕಲ್ ನಲ್ಲಿ ಸಂಚಾರ ದಟ್ಟಣೆ: ಶಾಸಕ ಯಶ್ ಪಾಲ್ ಸುವರ್ಣ ಪರಿಶೀಲನೆ

ಉಡುಪಿ: ಮಣಿಪಾಲ ನಗರದ ಹೃದಯ ಭಾಗವಾದ ಟೈಗರ್ ಸರ್ಕಲ್ ಬಳಿ ನಿತ್ಯ ಸಂಚಾರ ದಟ್ಟಣೆ ಬಗ್ಗೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಗುರುವಾರ ನಗರಸಭೆ ಅಧಿಕಾರಿಗಳು, ಪೊಲೀಸ್ ಉಪನಿರೀಕ್ಷಕ ಹಾಗೂ ಸ್ಥಳೀಯ ನಗರ ಸಭಾ ಸದಸ್ಯರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಖ್ಯ ರಸ್ತೆಯಲ್ಲಿ ವಾಹನಗಳ ಪಾರ್ಕಿಂಗ್, ಅವೈಜ್ಞಾನಿಕ ರೀತಿಯಲ್ಲಿ ಅಳವಡಿಸಿರುವ ಟ್ರಾಫಿಕ್ ಸಿಗ್ನಲ್, ಅಸಮರ್ಪಕ ಪ್ರಯಾಣಿಕರ ತಂಗುದಾಣ, ಫುಟ್ ಪಾತ್ ನಲ್ಲಿ ಬೀದಿ ಬದಿ ವ್ಯಾಪಾರದಿಂದ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದ್ದು […]