ಉಡುಪಿ:ವಿಶ್ವ ಕ್ಯಾನ್ಸರ್ ದಿನ 2026: ಕ್ಯಾನ್ಸರ್ ಜಾಗೃತಿಗಾಗಿ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ ವತಿಯಿಂದ ಬೈಕ್ ರ್ಯಾಲಿ (ಜಾಥಾ)

ಮಣಿಪಾಲ:ಪ್ರತಿ ವರ್ಷ ಫೆಬ್ರವರಿ 4ರಂದು ಆಚರಿಸಲ್ಪಡುವ ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ, ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು, ಮಣಿಪಾಲ ಆಟೋ ಕ್ಲಬ್, ಉಡುಪಿ ಜಾವಾ–ಯೆಜ್ಡಿ ಮೋಟಾರ್‌ಸೈಕಲ್ ಕ್ಲಬ್, ರಾಯಲ್ ಎನ್‌ಫೀಲ್ಡ್ ರೈಡರ್ಸ್ ಉಡುಪಿ ಹಾಗೂ ಆಭರಣ ಮೋಟಾರ್ಸ್, ಉಡುಪಿ ಇವರ ಸಹಯೋಗದೊಂದಿಗೆ “ನಾವು ಒಟ್ಟಾಗಿ ಕ್ಯಾನ್ಸರ್ ವಿರುದ್ಧ ಜೀವನಕ್ಕಾಗಿ ಸವಾರಿ ಮಾಡುತ್ತೇವೆ” ಎಂಬ ದ್ಯೇಯದೊಂದಿಗೆ ಬೈಕ್ ರ್ಯಾಲಿಯನ್ನು ಆಯೋಜಿಸಿತು. ಈ ಕಾರ್ಯಕ್ರಮದ ಉದ್ದೇಶ ಕ್ಯಾನ್ಸರ್ ತಡೆಗಟ್ಟುವಿಕೆ, ಆರಂಭಿಕ ಪತ್ತೆ ಹಾಗೂ ಕ್ಯಾನ್ಸರ್ ವಿರುದ್ಧ ಹೋರಾಟದಲ್ಲಿ ಸಾರ್ವಜನಿಕರ ಒಗ್ಗಟ್ಟಿನ ಮಹತ್ವದ […]