ಮಣಿಪಾಲ: ಕರ್ಫ್ಯೂ ಅವಧಿಯಲ್ಲೂ ರಾತ್ರಿ 12 ರವರೆಗೆ ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಯಕ್ಷಗಾನ ಕಲಾವಿದರ ಪ್ರತಿಭಟನೆ
ಉಡುಪಿ: ಕರ್ಫ್ಯೂ ಅವಧಿಯಲ್ಲಿಯೂ ರಾತ್ರಿ 12 ರವರೆಗೆ ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ವೃತ್ತಿಪರ, ಹವ್ಯಾಸಿ ಯಕ್ಷಗಾನ ಕಲಾವಿದರು ಶುಕ್ರವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಯಕ್ಷಗಾನ ಮೇಳಗಳಲ್ಲಿ ವೃತ್ತಿಪರ ಕಲಾವಿದರಾಗಿ ಹಾಗೂ ನೇಪಥ್ಯ ಕೆಲಸಗಾರರಾಗಿ ದುಡಿಯುತ್ತಿದ್ದೇವೆ. ಸದ್ಯ ರಾಜ್ಯದಲ್ಲಿ ವಿಧಿಸಿರುವ ಕರ್ಪ್ಯೂವಿನಿಂದ ನಮ್ಮ ಜೀವನವೇ ಅತಂತ್ರ ಸ್ಥಿತಿಯಲ್ಲಿದೆ […]