ಮಣಿಪಾಲ: ಬ್ರಹ್ಮಾವರ ಸೊಸೈಟಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ನೇಣಿಗೆ ಶರಣು
ಮಣಿಪಾಲ: ಬ್ರಹ್ಮಾವರದ ಸಹಕಾರಿ ಸೊಸೈಟಿವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಹಾಡಿಯಲ್ಲಿ ನೇಣುಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯ ಪೆರಂಪಳ್ಳಿ ಎಂಬಲ್ಲಿ ನಡೆದಿದೆ. ಬ್ರಹ್ಮಾವರದ ಉಪ್ಪಿನಕೋಟೆಯ ಸೊಸೈಟಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೃಥ್ವಿ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಸಾಲದ ಸುಳಿಗೆ ಸಿಲುಕಿದ್ದ ಎನ್ನಲಾಗಿದೆ. ಅಲ್ಲದೆ ಇಂದು ಮುಂಜಾನೆ ಈತ ತನ್ನ ಮಾವನಿಗೆ ‘ತಾನು ವಿಪರೀತ ಸಾಲ ಮಾಡಿದ್ದು, ನನಗೆ ಬದುಕಲು ಸಾಧ್ಯವಾಗುತ್ತಿಲ್ಲ. ನನ್ನ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳಿ’ ಎಂದು ವಾಟ್ಸಾಪ್ ಸಂದೇಶ ಕಳುಹಿಸಿದ್ದನು. ಬಳಿಕ ಪೆರಂಪಳ್ಳಿಯ […]