ಮಣಿಪಾಲ: ಹಾಡಿಯಲ್ಲಿ ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ

ಮಣಿಪಾಲ: ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆಕೊಂಡ ಘಟನೆ ಶಿವಳ್ಳಿ ಗ್ರಾಮದ ಮೂಡುಸಗ್ರಿಯ ಹಾಡಿಯಲ್ಲಿ ನಡೆದಿದೆ. ನವೀನ್‌ (31) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ವಿಪರೀತ ಕುಡಿತದ ಚಟ ಹೊಂದಿದ್ದು, ಇದೇ ಕಾರಣದಿಂದ ಜೀವನದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.