ಮಣಿಪಾಲ: ಯುವಕರಲ್ಲಿ ದೇಶಪ್ರೇಮ ಸದಾ ಜಾಗೃತವಾಗಿರಬೇಕು; ಡಾ. ಎಚ್ ಎಸ್ ಬಲ್ಲಾಳ್

ಮಣಿಪಾಲ: `ದೇಶದ ಪ್ರತಿಯೊಬ್ಬ ನಾಗರಿಕರಲ್ಲೂ ದೇಶಪ್ರೇಮ ಜಾಗೃತವಾಗಿರಬೇಕು. ಅದರಲ್ಲೂ ಯುವ ಮನಸ್ಸುಗಳಲ್ಲಿ ದೇಶಪ್ರೇಮ ತುಂಬಿರಲೇಬೇಕು. ಈ ನೆಲೆಯಲ್ಲಿ ದೇಶ ಪ್ರೇಮವನ್ನು ಮೂಡಿಸುವ ಕಾರ್ಯಕ್ರಮಗಳು ನಿತ್ಯ ನಿರಂತರ ನಡೆಯುತ್ತಿರಬೇಕು. ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಮೂಡಿಸುವ ಉದ್ದೇಶದಿಂದ ರೇಡಿಯೋ ಮಣಿಪಾಲ್ ನಲ್ಲಿ ಆಯೋಜಿಸಲಾದ ದೇಶಭಕ್ತಿಗೀತೆ ಸಮೂಹ ಗಾಯನ ಸ್ಪರ್ಧಾ ಕಾರ್ಯಕ್ರಮ ಅಭಿನಂದನೀಯ’ ಎಂದು ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಇದರ ಸಹ ಕುಲಾಧಿಪತಿ ಡಾ. ಎಚ್ ಎಸ್ ಬಲ್ಲಾಳ್ ಹೇಳಿದರು. ಅವರು ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮತ್ತು […]