ನಾಳೆ ಮಣಿಪಾಲ ಎಂಡ್ ಪಾಯಿಂಟ್ ನಲ್ಲಿ ಯೋಗಥಾನ್ ಕಾರ್ಯಕ್ರಮ

ಮಣಿಪಾಲ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಮತ್ತು ಡಾ. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಯೋಗಥಾನ್ ಕಾರ್ಯಕ್ರಮವು ಜನವರಿ 15 ರಂದು ಬೆಳಗ್ಗೆ 7 ಗಂಟೆಗೆ ಮಣಿಪಾಲದ ಎಂಡ್ ಪಾಯಿಂಟ್‌ನಲ್ಲಿ ನಡೆಯಲಿದೆ. ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಕೆ.ರಘುಪತಿ ಭಟ್ […]
ಹೆಬ್ರಿ: ಅಡ್ಡ ಬಂದ ಹಸುವನ್ನು ತಪ್ಪಿಸಲು ಹೋಗಿ ಹೊಂಡಕ್ಕೆ ಬಿದ್ದ ಓಮ್ನಿ

ಹೆಬ್ರಿ: ವಾಹನಚಲಾಯಿಸುತ್ತಿದ್ದಾಗ ಹಸುವೊಂದು ಅಡ್ಡಬಂತೆಂದು ಅದನ್ನು ತಪ್ಪಿಸಲು ಹೋಗಿ ಒಮ್ನಿಯೊಂದು ಹೊಂಡಕ್ಕೆ ಬಿದ್ದ ಘಟನೆ ಹೆಬ್ರಿಯ ಎಸ್‌ಆರ್ ಶಾಲೆಯ ಬಳಿ ನಡೆದಿದೆ. ಮಣಿಪಾಲದಿಂದ ಹರಿಹರ ಕಡೆಗೆ ಹೋಗುತ್ತಿದ್ದ ಓಮ್ನಿಯು ಹಸುವನ್ನು ತಪ್ಪಿಸಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿದ್ದ ಹೊಂಡಕ್ಕೆ ಬಿದ್ದಿದೆ. ಘಟನೆಯಲ್ಲಿ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಜ. 12 ರಂದು ರಜತಾದ್ರಿಯಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜನವರಿ 12 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ […]
ಶಿವಪಾಡಿ: ಫೆ.25 ರಿಂದ ಮಾ. 5 ರವರೆಗೆ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಐತಿಹಾಸಿಕ ಅತಿರುದ್ರಯಾಗ

ಮಣಿಪಾಲ: ಇಲ್ಲಿನ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಲೋಕ ಕಲ್ಯಾಣ ಮತ್ತು ವಿಶ್ವಶಾಂತಿಗಾಗಿ ಐತಿಹಾಸಿಕ ಅತಿರುದ್ರಯಾಗವನ್ನು ಫೆ.25 ರಿಂದ ಮಾ. 4 ರವರೆಗೆ ಆಯೋಜಿಸಲಾಗುವುದು. ಯಾಗದ ಕುರಿತು ನಡೆದ ಸಭೆಯ ಉದ್ಘಾಟನೆಯಲ್ಲಿ ಮಾತನಾಡಿದ ಮಣಿಪಾಲ ವಿಶ್ವ ವಿದ್ಯಾಲಯದ ಸಹಕುಲಪತಿ ಹಾಗೂ ಯಾಗ ಸಮಿತಿಯ ಗೌರವಾಧ್ಯಕ್ಷ ಡಾ. ಎಚ್.ಎಸ್. ಬಲ್ಲಾಳ್, ಕಾರ್ಯಕ್ರಮಕ್ಕೆ ಬೇಕಾಗುವ ಎಲ್ಲ ರೀತಿಯ ಸಹಕಾರವನ್ನು ಸಂಸ್ಥೆಯ ಪರವಾಗಿ ನೀಡಲಾಗುವುದು ಎಂದರು. ಶೃಂಗೇರಿ ಶ್ರೀ ಜಗದ್ಗುರು ಶಂಕರಾಚಾರ್ಯ ಮಠದ ಉಡುಪಿ ಶಾಖೆಯ ಧರ್ಮಾಧಿಕಾರಿ ನಾಗೇಶ್ ಶಾಸ್ತ್ರಿ ಇವರು […]
ಕೆ.ಎಂ.ಸಿ: ಎರಡನೇ ಅಂತರರಾಷ್ಟ್ರೀಯ ಗ್ಲೋಬಲ್ ಕ್ಯಾನ್ಸರ್ ಕನ್ಸೋರ್ಟಿಯಂ ಸಮ್ಮೇಳನ ಉದ್ಘಾಟನೆ

ಮಣಿಪಾಲ: ಮಣಿಪಾಲದ ಫಾರ್ಚೂನ್ ಇನ್ ವ್ಯಾಲಿ ವ್ಯೂನಲ್ಲಿ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮಣಿಪಾಲ, ಜಾಗತಿಕ ಕ್ಯಾನ್ಸರ್ ಒಕ್ಕೂಟ ಮತ್ತು ಮಣಿಪಾಲ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರಗಳು ಜಂಟಿಯಾಗಿ ಎರಡನೇ ಅಂತರರಾಷ್ಟ್ರೀಯ ಗ್ಲೋಬಲ್ ಕ್ಯಾನ್ಸರ್ ಕನ್ಸೋರ್ಟಿಯಂ ಸಮ್ಮೇಳನವನ್ನು ಜನವರಿ 7 ಮತ್ತು 8 ರಂದು ಆಯೋಜಿಸಿದ್ದು, ಸಮ್ಮೇಳನದಲ್ಲಿ 200 ಕ್ಕೂ ಹೆಚ್ಚು ದೇಶ ವಿದೇಶಗಳ ಪ್ರತಿನಿಧಿಗಳು ಮತ್ತು ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದಾರೆ. ಅಂತರರಾಷ್ಟ್ರೀಯ ಸಂಸ್ಥೆಗಳಾದ ಮಾರ್ಕಿ ಕ್ಯಾನ್ಸರ್ ಸೆಂಟರ್, ಮೇಯೊ ಕ್ಲಿನಿಕ್, ಲಾಹೆ ಹಾಸ್ಪಿಟಲ್ ಹಾಗೂ ಮೆಡಿಕಲ್ ಸೆಂಟರ್ […]