ಜಿಲ್ಲಾ ಮತದಾರರ ಪಟ್ಟಿ ಪರಿಷ್ಕರಣೆ: ಸರ್ವಪಕ್ಷ ಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿ ಸಭೆ

ಉಡುಪಿ: ಸೋಮವಾರದಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಮತದಾರರ ಪಟ್ಟಿ ಪರಿಷ್ಕರಣೆ ಸಭೆಯು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ಅತ್ಯಂತ ಪಾರದರ್ಶಕವಾಗಿ, ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲದಂತೆ ನಡೆಸಲಾಗುತ್ತಿದೆ ಎಂದು ಸರ್ವಪಕ್ಷ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದರು. ಚುನಾವಣಾ ಆಯೋಗದ ಮಾರ್ಗಸೂಚಿಯ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ನಡೆಸಲಾಗುತ್ತಿದ್ದು, ಮತದಾರರ ಪಟ್ಟಿಯಲ್ಲಿ ಯುವ ಮತದಾರರ ಸೇರ್ಪಡೆಗೆ […]

ಭತ್ತದ ಮೋಟೆ ಹೊತ್ತಿದ್ದ ಲಾರಿ ಕಾರಿನ ಮೇಲೆ ಪಲ್ಟಿ: ಪ್ರಯಾಣಿಕರು ಪವಾಡ ಸದೃಶ ಪಾರು

ಪರ್ಕಳ: ಇಲ್ಲಿನ ರಸ್ತೆ ಅವ್ಯವಸ್ಥೆಯಿಂದಾಗಿ ಕೆಳಪರ್ಕಳದಲ್ಲಿ ಭತ್ತದ ಮೂಟೆಗಳನ್ನು ಹೊತ್ತೊಯ್ಯುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಎರಡು ಪ್ರವಾಸಿ ಕಾರುಗಳ ಮೇಲೆ ಪಲ್ಟಿಯಾಗಿದೆ. ಇದರಲ್ಲಿ ಒಂದು ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಲಾರಿಯಲ್ಲಿದ್ದ ಭತ್ತದ ಮೂಟೆಗಳು ರಸ್ತೆಯ ತುಂಬೆಲ್ಲಾ ಚೆಲ್ಲಾಪಿಲ್ಲಿಯಾಗಿ ಪ್ರಯಾಣಿಕರು ಕೆಲಹೊತ್ತು ಪರದಾಡಿದರು. ಕಾರಿನಲ್ಲಿದ್ದವರು ಪವಾಡಸದೃಶರಾಗಿ ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಇಲ್ಲಿನ ಮಣಿಪಾಲ- ಪರ್ಕಳ ಹೆದ್ದಾರಿಯಲ್ಲಿ ರಸ್ತೆ ಕಾಮಗಾರಿಗಳು ನಡೆಯುತ್ತಿದ್ದು, ಬೇರೆ ಜಿಲ್ಲೆ ಅಥವಾ ರಾಜ್ಯಗಳಿಂದ ಆಗಮಿಸುವ ವಾಹನ ಚಾಲಕರು ಉಡುಪಿಯಿಂದ ಕಾರ್ಕಳಕ್ಕೆ ತೆರಳುವಾಗ ಗೊಂದಲಕ್ಕೆ […]

ಮಾಹೆ ಗಾಂಧಿಯನ್ ಸೆಂಟರ್ ನಲ್ಲಿ ಕಿರುನಾಟಕ ಪ್ರದರ್ಶನ

ಮಣಿಪಾಲ: ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ (ಜಿಸಿಪಿಎಎಸ್) ವಿದ್ಯಾರ್ಥಿಗಳು ಬುಧವಾರ ಪ್ರದರ್ಶಿಸಿದ ಸಾದತ್ ಹಸನ್ ಮಂಟೋ, ಹೆರಾಲ್ಡ್ ಪಿಂಟರ್ ಮತ್ತು ಸುರೇಂದ್ರ ವರ್ಮಾ ಅವರ ಮೂರು ಕಿರುನಾಟಕಗಳು ಆಧುನಿಕ ಜೀವನದ ಸಂಕೀರ್ಣತೆಯ ಬಗ್ಗೆ ಪ್ರೇಕ್ಷಕರನ್ನು ಯೋಚಿಸುವಂತೆ ಮಾಡಿತು. ಮೂರು ಕಿರುನಾಟಕಗಳಾದ ಉಪರ್ ನೀಚೆ ಔರ್ ದರ್ಮಿಯಾನ್ (ಸಾದತ್ ಹಸನ್ ಮಂಟೋ), ವಿಕ್ಟೋರಿಯಾ ಸ್ಟೇಷನ್ (ಹೆರಾಲ್ಡ್ ಪಿಂಟರ್), ನೀಂದ್ ಕ್ಯುನ್ ರಾತ್ ಭರ್ ನಹಿ ಆತಿ(ಸುರೇಂದ್ರ ವರ್ಮ)ನ್ನು ರಂಗ ನಿರ್ದೇಶಕರಾದ ಅಭಿನವ್ ಗ್ರೋವರ್ […]

ದಶಮಾನೋತ್ಸವ ಸಂಭ್ರಮದಲ್ಲಿ ಶ್ರೀ ಶಾರದಾ ಟೀಚರ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್

ಮಣಿಪಾಲ: ಉದ್ಯೋಗ ಆಥವಾ ನೌಕರಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಕನಸು ಕಾಣುವ ಯುವತಿ/ಮಹಿಳೆಯರಿಗೆ ಉದ್ಯೋಗ ಕಲ್ಪಿಸಿಕೊಡಲು ನೆರವಾಗುವ ಒಂದು ವರ್ಷದ ನರ್ಸರಿ / ಮಾಂಟೆಸ್ಸರಿ ಕೋರ್ಸ್ ಅನ್ನು ಮಣಿಪಾಲದ, ಶ್ರೀ ಶಾರದ ಟೀಚರ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ನಲ್ಲಿ ನಡೆಸಲಾಗುತ್ತಿದೆ. ದಶಮಾನೋತ್ಸವ ಆಚರಿಸುತ್ತಿರುವ ಈ ಸಂಸ್ಥೆಯು ಕಳೆದ ಹತ್ತು ವರ್ಷಗಳಿಂದಲೂ ತರಬೇತಿ ನೀಡುತ್ತಿದ್ದು, 500ಕ್ಕೂ ಮಿಕ್ಕಿ ಯುವತಿಯರಿಗೆ ಉದ್ಯೋಗವನ್ನು ದೊರಕಿಸಿಕೊಡುವಲ್ಲಿ ಯಶ್ವಸಿಯಾಗಿದೆ. ಮಹಿಳೆಯರು ಸ್ವಾವಲಂಬಿಗಳಾಗಬೇಕೆಂಬ ಉದ್ದೇಶದಿಂದ ಸ್ಥಾಪಿಸಿರುವ ಈ ತರಬೇತಿ ಸಂಸ್ಥೆಯು ವಿದ್ಯಾರ್ಥಿಗಳಿಗೆ ಸಂಪೂರ್ಣ ಪ್ರಾಯೋಗಿಕ ತರಬೇತಿ ನೀಡಿ, ಉದ್ಯೋಗ […]

ಮಾಹೆಯ ನೂತನ ರಿಜಿಸ್ಟ್ರಾರ್ ಆಗಿ ಡಾ. ಪಿ. ಗಿರಿಧರ್ ಕಿಣಿ ಅಧಿಕಾರ ಸ್ವೀಕಾರ

ಮಣಿಪಾಲ: ಮಾಹೆಯ ಅಡ್ಮಿಶನ್ ವಿಭಾಗದ ನಿರ್ದೇಶಕ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ, ಡಾ. ಪಿ. ಗಿರಿಧರ್ ಕಿಣಿ ಇವರು ಮಾಹೆ ಮಣಿಪಾಲದ ನೂತನ ರಿಜಿಸ್ಟ್ರಾರ್(ಕುಲಸಚಿವ) ಆಗಿ ನೇಮಕಗೊಂಡಿದ್ದು ಡಿ. 01 ರಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಬಿ.ಇ. ಎಲೆಕ್ಟ್ರಿಕಲ್ ಎಂಡ್ ಎಲೆಕ್ಟ್ರಾನಿಕ್ಸ್ (1995 ) ಮತ್ತು ಎಂ.ಟೆಕ್(1998) ಮತ್ತು ಪಿಎಚ್ ಡಿ ಪದವೀಧರರಾದ ಇವರು 1999 ರಲ್ಲಿ ತಾವು ಓದಿದ ಕಾಲೇಜಿನಲ್ಲಿಯೆ ಉಪನ್ಯಾಸಕ ವೃತ್ತಿಯನ್ನು ಆರಂಭಿಸಿ ಅಂದಿನಿಂದ ಮಾಹೆಯಲ್ಲಿ […]