ಮಣಿಪಾಲ: ಡಾ. ವಿ.ಎಸ್.ಆಚಾರ್ಯ ಪುತ್ಥಳಿ ಬಳಿ “ಕೋಟಿ ಕಂಠ ಗಾಯನ”

ಮಣಿಪಾಲ: ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅ.28ರಂದು ರಾಜ್ಯಾದ್ಯಂತ ಹಮ್ಮಿಕೊಂಡಿರುವ “ಕೋಟಿ ಕಂಠ ಗಾಯನ” ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವಿನೂತನ ರೀತಿಯಲ್ಲಿ ಭಾಗವಹಿಸಲಿದೆ. ಅ.28 ಶುಕ್ರವಾರ ಬೆಳಿಗ್ಗೆ 10.30ಕ್ಕೆ ಮಣಿಪಾಲದ ರಜತಾದ್ರಿ ಬಳಿ ಇರುವ ಡಾ. ವಿ.ಎಸ್. ಆಚಾರ್ಯರವರ ಪುತ್ಥಳಿಯ ಬಳಿ ಸುಮಾರು 500 ಮಂದಿ ಬಿಜೆಪಿ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಸೇರಿ ‘ಕನ್ನಡ ಶಾಲು ಮತ್ತು […]
ಮಣಿಪಾಲ: ಮಾಹೆಯ ಆರ್ಕಿಟೆಕ್ಚರ್ ವಿಭಾಗದಿಂದ ಡಾ. ವಿ ಎಸ್ ಆಚಾರ್ಯ ರಸ್ತೆ ವಿನ್ಯಾಸ

ಮಣಿಪಾಲ: ನಗರ ಭೂ ಸಾರಿಗೆ ನಿರ್ದೇಶನಾಲಯ ಅಡಿಯಲ್ಲಿ ನೋಂದಾಯಿತವಾಗಿರುವ ಕೆ.ಎನ್.ಎಮ್.ಟಿ.ಎ ಯು ಕರ್ನಾಟಕದ ಶ್ರೇಣಿ 2 ಮತ್ತು ಶ್ರೇಣಿ 3 ರ ನಗರಗಳಲ್ಲಿ ಬೀದಿ ನಡಿಗೆಗಳನ್ನು ಸುಧಾರಿಸಲು ತನ್ನ ಆಸಕ್ತಿಯನ್ನು ವ್ಯಕ್ತಪಡಿಸಿದೆ. ಬೀದಿಗಳ ವಿನ್ಯಾಸ ಪ್ರಕ್ರಿಯೆಯನ್ನು ಸುಧಾರಿಸುವಲ್ಲಿ ಸಮಾಜದ ಎಲ್ಲಾ ಪಾಲುದಾರರ ಸಹಯೋಗವನ್ನು ಕೆ.ಎನ್.ಎಮ್.ಟಿ.ಎ ಹೊಂದಿದೆ. ಈ ನಿಟ್ಟಿನಲ್ಲಿ, ಉಡುಪಿ ನಗರ ಪಾಲಿಕೆಯು, ಡಾ.ವಿ.ಎಸ್.ಆಚಾರ್ಯ ರಸ್ತೆಯ ವಿನ್ಯಾಸ ಅಭಿವೃದ್ಧಿ ಪಡಿಸಲು ಇಚ್ಛೆ ವ್ಯಕ್ತಪಡಿಸಿದೆ. ಸಿಂಡಿಕೇಟ್ ವೃತ್ತದಿಂದ ಆರಂಭಗೊಂಡು ಜಿಲ್ಲಾಧಿಕಾರಿ ಕಚೇರಿವರೆಗೆ ಸರಿಸುಮಾರು 1.8 ಕಿಮೀ ಉದ್ದದ ರಸ್ತೆ […]
ಸಿದ್ಧಾಂತದ ಹೆಸರಿನಲ್ಲಿ ಪರದೆಯ ಮೇಲೆ ಹಿಂಸೆಯನ್ನು ಅನುಮೋದಿಸುವುದು ಕಳವಳಕಾರಿ: ರಘನಂದನ್

ಉಡುಪಿ: ಇಂದು ಸಿನಿಮಾದಲ್ಲಿನ ಹಿಂಸೆಯ ಸ್ವರೂಪ ಬದಲಾಗುತ್ತಿದ್ದು, ಕಾನೂನನ್ನು ಕೈಗೆ ತೆಗೆದುಕೊಳ್ಳುತ್ತಿರುವ ನಾಯಕ ಪಾತ್ರಗಳೇ ಹೆಚ್ಚುತ್ತಿವೆ. ಸಿದ್ಧಾಂತದ ಹೆಸರಿನಲ್ಲಿ ಪರದೆಯ ಮೇಲೆ ಹಿಂಸೆಯನ್ನು ಅನುಮೋದಿಸುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ ಎಂದು ಹಿರಿಯ ನಾಟಕಕಾರ ಹಾಗೂ ನಿರ್ದೇಶಕ ರಘುನಂದನ ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್‌ನಲ್ಲಿ ‘ಸಿನೆಮಾದಲ್ಲಿ ಫ್ಯಾಸಿಸಂ’ ಎಂಬ ವಿಷಯದ ಕುರಿತು ಮಾತನಾಡಿದ ರಘುನಂದನ, ಜನಪ್ರಿಯ ಸಿನಿಮಾ ಪ್ರಕಾರವು ನಮ್ಮ ಸಮಾಜದ ಕೆಲವು ಪ್ರವೃತ್ತಿಗಳನ್ನು ಪ್ರತಿಬಿಂಬಿಸುತ್ತದೆ. ಕಾನೂನಿನ ಮೇಲಿನ ಗೌರವದಿಂದ ದೂರ […]
ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್: ಟೀಚರ್ಸ್ ಟ್ರೈನಿಂಗ್ ಪ್ರವೇಶಾತಿ ಪಡೆಯಲು ಅ.20 ಕೊನೆಯ ದಿನ

ಮಣಿಪಾಲ: ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಮಣಿಪಾಲದಲ್ಲಿ ಮಹಿಳೆಯರಿಗೆ ಮಾಂಟೆಸ್ಸರಿ/ನರ್ಸರಿ ಟೀಚರ್ ಟ್ರೈನಿಂಗ್ ಕೋರ್ಸಿಗೆ ಪ್ರವೇಶಾತಿ (2022-23) ಪ್ರಕ್ರಿಯೆ ಆರಂಭವಾಗಿದ್ದು, ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ಮಹಿಳಾ ಅಭ್ಯರ್ಥಿಗಳು ಈ ತರಬೇತಿಗೆ ಪ್ರವೇಶ ಪಡೆದುಕೊಳ್ಳಬಹುದು. ಕೇವಲ ಕೆಲವೇ ಸೀಟುಗಳು ಲಭ್ಯವಿದ್ದು, ಆಸಕ್ತಿಯಿರುವವರು, ಹೆಚ್ಚಿನ ಮಾಹಿತಿಗಾಗಿ ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್, ಡಿ.ಸಿ ಆಫೀಸ್ ಬಳಿ, ಕ್ರಿಸ್ಟಲ್ ಬಿಜ್ಹ್ ಹಬ್ ಕಾಂಪ್ಲೆಕ್ಸ್, 1ನೇ ಮಹಡಿಯಲ್ಲಿರುವ ಸಂಸ್ಥೆಯನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.
ಇಂದ್ರಾಳಿ ರಸ್ತೆ ಕಾಮಗಾರಿ: ಘನ ವಾಹನಗಳಿಗೆ ಪರ್ಯಾಯ ಮಾರ್ಗ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ಕಿ.ಮೀ 76.040 ರಿಂದ ಕಿ.ಮೀ 85.200 ವರೆಗೆ ಚತುಷ್ಪಥ ಕಾಮಗಾರಿ ಇಂದ್ರಾಳಿ ರೈಲ್ವೇ ಸೇತುವೆ ಬಳಿ ಬಾಕಿ ಇರುವ ಕಾಂಕ್ರೀಟೀಕರಣ ಕಾಮಗಾರಿ ಭರದಿಂದ ನಡೆಯುತ್ತಿದ್ದು, ಇಂದ್ರಾಳಿ ರೇಲ್ವೆ ಸೇತುವ ಮೂಲಕ ಭಾರೀ ವಾಹನ ಸಂಚಾರವನ್ನು ಕಡ್ಡಾಯವಾಗಿ ನಿರ್ಬಂಧಿಸಿದ್ದು, ವಾಹನಗಳ ದಟ್ಟಣಿಕೆಯಿಂದ ಸುಗಮ ಸಂಚಾರಕ್ಕೆ ಉಳಿದ ವಾಹನಗಳಿಗೆ ಅಡಚಣೆಯಗುತ್ತಿರುವ ಹಿನ್ನಲೆ ಇತರ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕೆಂದು ಸೂಚಿಸಲಾಗಿದೆ. ಕುಂದಾಪುರ ಕಡೆಯಿಂದ ಬರುವ ಘನವಾಹನಗಳು ಅಂಬಾಗಿಲು-ಪೆರಂಪಳ್ಳಿ-ಮಣಿಪಾಲ ರಸ್ತೆಯ ಮೂಲಕ ಚಲಿಸುವುದು. ಉಡುಪಿಯಿಂದ ಬರುವ […]