ಆಜಾದಿ ಕಾ ಅಮೃತ್ ಮಹೋತ್ಸವ ಐಕಾನಿಕ್ ವೀಕ್ ಆಚರಣೆ: ಕೆನರಾ ಬ್ಯಾಂಕ್ ಸಿಂಡಿಕೇಟ್ ಗೋಲ್ಡನ್ ಜ್ಯೂಬಿಲಿ ಹಾಲ್‌ನಲ್ಲಿ ನೇರಪ್ರಸಾರ

ಉಡುಪಿ: ನವದೆಹಲಿಯ ವಿಜ್ಞಾನ ಭವನ್‌ನಲ್ಲಿ ನಡೆಯುವ ಆಜಾದಿ ಕಾ ಅಮೃತ್ ಮಹೋತ್ಸವ ಐಕಾನಿಕ್ ವೀಕ್ ಸೆಲೆಬ್ರೇಷನ್ ಕಾರ್ಯಕ್ರಮವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೂನ್ 6 ರಂದು ಉದ್ಘಾಟಿಸಲಿದ್ದಾರೆ. ಭಾರತದ ಹಣಕಾಸು ಸಚಿವಾಲಯ, ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ ಮತ್ತು ಭಾರತ ಸರಕಾರದ ವತಿಯಿಂದ ನಡೆಯುತ್ತಿರುವ ಈ ಕಾರ್ಯಕ್ರಮವನ್ನು ಭಾರತದಾದ್ಯಂತ ಸುಮಾರು 75 ಜಿಲ್ಲೆಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತಿದ್ದು, ಕರ್ನಾಟಕದಿಂದ ಉಡುಪಿ ಜಿಲ್ಲೆಯನ್ನು ಆಯ್ಕೆ ಮಾಡಲಾಗಿದೆ. ನೇರ ಪ್ರಸಾರ ಕಾರ್ಯಕ್ರಮವನ್ನು ಲೀಡ್ ಬ್ಯಾಂಕ್ ಕೆನರಾ ಬ್ಯಾಂಕ್ ಉಡುಪಿ, ಇವರ […]

ಮಣಿಪಾಲ ಆರೋಗ್ಯಕಾರ್ಡ್ 2022ರ ನೋಂದಾವಣೆ ಪ್ರಕ್ರಿಯೆಗೆ ರಘುಪತಿ ಭಟ್ ರಿಂದ ಚಾಲನೆ

ಮಣಿಪಾಲ: 2022ರ ಸಾಲಿನ ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಾವಣೆಗೆ ಜೂನ್ 4 ರಂದು ಚಾಲನೆ ನೀಡಲಾಯಿತು. ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಕೈಗೆಟಕುವ ದರದಲ್ಲಿ ದೊರಕಿಸಿಕೊಡುವ ಉದ್ದೇಶದಿಂದ ಮಣಿಪಾಲ ಆರೋಗ್ಯಕಾರ್ಡ್ ಅನ್ನು ಪ್ರಾರಂಭಿಸಲಾಯಿತು. ಕಾರ್ಡುದಾರರು ಮಣಿಪಾಲ, ಕಾರ್ಕಳ, ಮಂಗಳೂರು, ಗೋವಾ ಮತ್ತು ಕಟೀಲ್‌ನಲ್ಲಿರುವ ಮಣಿಪಾಲ ಗುಂಪಿನ ಆಸ್ಪತ್ರೆಗಳಲ್ಲಿ ವೈದ್ಯಕೀಯ ಮತ್ತು ದಂತ ಚಿಕಿತ್ಸೆಗಳಿಗೆ ರಿಯಾಯಿತಿ ಪ್ರಯೋಜನಗಳನ್ನು ಪಡೆಯಬಹುದು. ಶನಿವಾರ ನಡೆದ ಕಾರ್ಯಕ್ರಮದಲ್ಲಿ ಮೊದಲ ಕಾರ್ಡ್ ಅನ್ನು ವಿತರಿಸುವುದರ ಮೂಲಕ ಮಣಿಪಾಲ ಆರೋಗ್ಯ ಕಾರ್ಡ್ 2022ರ ನೋಂದಾವಣೆಗೆ ಉಡುಪಿ […]

ಮಾಹೆ: ಗಾಂಧಿಯನ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್‌ನ ವಾರ್ಷಿಕೋತ್ಸವ ಸಮಾರಂಭ

ಮಣಿಪಾಲ: ಮುಂಬರುವ ದಿನಗಳಲ್ಲಿ ವಿಜ್ಞಾನ ಮತ್ತು ಕಲೆಗಳ ಸಮ್ಮಿಲನದಿಂದ ಶಿಕ್ಷಣವು ಹೆಚ್ಚು ಹೆಚ್ಚು ಅಂತರಶಿಸ್ತಿಯವಾಗಲಿದೆ ಎಂದು ಮಾಹೆಯ ಕಾರ್ಯನಿರ್ವಾಹಕ ಉಪಾಧ್ಯಕ್ಷ ಡಾ.ಎಚ್.ವಿನೋದ್ ಭಟ್ ಹೇಳಿದರು. ಮಾಹೆಯ ಗಾಂಧಿಯನ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್‌ನ ವಾರ್ಷಿಕೋತ್ಸವ ‘ಸರ್ವೋದಯ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಕ್ತ ಕಲೆ ಮತ್ತು ಸಮಾಜಶಾಸ್ತ್ರೀಯ ವಿಷಯಗಳು ಮುಂದಿನ ದಿನಗಳಲ್ಲಿ ವೈದ್ಯಕೀಯ ಮತ್ತು ತಾಂತ್ರಿಕ ಶಿಕ್ಷಣದಲ್ಲೂ ಹೆಚ್ಚಿನ ಮಹತ್ವವನ್ನು ಕಂಡುಕೊಳ್ಳಲಿದೆ. ಇಂತಹ ಸನ್ನಿವೇಶದಲ್ಲಿ ಮಾಹೆಯ ಜಿಸಿಪಿಎಎಸ್ ಒದಗಿಸುತ್ತಿರುವ ಕೋರ್ಸ್‌ಗಳು ಬಹಳಷ್ಟು ಮಹತ್ವವನ್ನು ಪಡೆಯುತ್ತವೆ ಮತ್ತು ವಿಶ್ವವಿದ್ಯಾನಿಲಯವು ಇಂತಹ […]

ಕೈ ಶಸ್ತ್ರಚಿಕಿತ್ಸೆಯ ಪ್ರವರ್ತಕ ಡಾ ಭಾಸ್ಕರಾನಂದ ಕುಮಾರ್ ಗೆ ಐ ಎಫ್ ಎಸ್ ಎಸ್ ಎಚ್ ಪ್ರಶಸ್ತಿ

ಉಡುಪಿ: ಇಂಡಿಯನ್ ಸೊಸೈಟಿ ಫಾರ್ ಸರ್ಜರಿ ಆಫ್ ದಿ ಹ್ಯಾಂಡ್ ಸಂಸ್ಥೆಯು ಕೈ ಶಸ್ತ್ರಚಿಕಿತ್ಸೆಯ ಪ್ರವರ್ತಕ ಡಾ ಭಾಸ್ಕರಾನಂದ ಕುಮಾರ್ ಅವರನ್ನು ಐ ಎಫ್ ಎಸ್ ಎಸ್ ಎಚ್ ( ಇಂಟರ್ ನ್ಯಾಷನಲ್ ಫ಼ೆಡರೇಶನ್ ಆಫ್ ಸೊಸೈಟೀಸ್ ಫಾರ್ ಸರ್ಜರಿ ಆಫ್ ಹ್ಯಾಂಡ್) ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದ್ದು, ಐ ಎಫ್ ಎಸ್ ಎಸ್ ಎಚ್ ಸಂಸ್ಥೆಯ ನಾಮನಿರ್ದೇಶನ ಸಮಿತಿಯು ಅದನ್ನು ಅನುಮೋದಿಸಿದೆ. ಜೂನ್ 6 ರಂದು ಲಂಡನ್ ನ ಐ ಎಫ್ ಎಸ್ ಎಸ್ ಎಚ್ ಕಾಂಗ್ರೆಸ್‌ನ […]

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆಯಲ್ಲಿ ಹಿಮೋಫಿಲಿಯಾ ಚಿಕಿತ್ಸಾ ಕೇಂದ್ರ ಉದ್ಘಾಟನೆ

ಮಣಿಪಾಲ: ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗ ಮತ್ತು ಹಿಮೋಫಿಲಿಯಾ ಸೊಸೈಟಿ, ಮಣಿಪಾಲ ಇವುಗಳ ಸಹಯೋಗದೊಂದಿಗೆ, ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದಲ್ಲಿ ಹಿಮೋಫಿಲಿಯಾ ಚಿಕಿತ್ಸಾ ಕೇಂದ್ರವನ್ನು ಮೇ 28 ರಂದು ಉದ್ಘಾಟಿಸಲಾಯಿತು. ಹಿಮೋಫಿಲಿಯಾ ಅನುವಂಶಿಕ ಮತ್ತು ಗುಣಪಡಿಸಲಾಗದ ಜೀವಮಾನವಿಡೀ ಇರುವ ರಕ್ತಸ್ರಾವದ ಕಾಯಿಲೆಯಾಗಿದೆ. ಇದು ಹತ್ತು ಸಾವಿರ ಪುರುಷರಲ್ಲಿ ಒಬ್ಬರ ಮೇಲೆ ಪರಿಣಾಮ ಬೀರುತ್ತದೆ. ಹಿಮೋಫಿಲಿಯಾ ರೋಗಿಗಳಲ್ಲಿ, ರಕ್ತ ಹೆಪ್ಪುಗಟ್ಟುವಿಕೆ ಅಂಶಗಳ ಕೊರತೆ ಅಥವಾ ಅನುಪಸ್ಥಿತಿಯಿಂದ ಸಾಮಾನ್ಯವಾಗಿ ರಕ್ತ ಹೆಪ್ಪುಗಟ್ಟುವುದಿಲ್ಲ. ಈ ಪುನರಾವರ್ತಿತ ರಕ್ತಸ್ರಾವದ […]