ಬರಿದಾಗುತ್ತಿದೆ ಅಂತರ್ಜಲ: ಕರಾವಳಿಗರಿಗೆ “ಹಾಟ್” ನ್ಯೂಸ್! ಮುಂದಿದೆ ಸಂಕಷ್ಟ?

ದಕ್ಷಿಣ ಕನ್ನಡದಲ್ಲಿ ಬಿಸಿಲಿನ ತೀವ್ರತೆ: ಅಂತರ್ಜಲ ಮಟ್ಟ ಕುಸಿತ, ಕುಡಿಯುವ ನೀರಿಗೆ ಆತಂಕ ರಾಜ್ಯದಲ್ಲಿ ಅತೀ ಹೆಚ್ಚು ಮಳೆಯಾಗುವ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಈ ಬಾರಿ ಪರಿಸ್ಥಿತಿ ತೀವ್ರವಾಗಿ ಬದಲಾಗಿದೆ. 35–36 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದ್ದು, ಬಿಸಿಲಿನ ತೀವ್ರತೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಕುಸಿಯುತ್ತಿದೆ ಅಂತರ್ಜಲ, ಬರಿದಾಗುತ್ತಿವೆ ಬಾವಿಗಳು ಜಿಲ್ಲೆಯ ಹಲವು ಭಾಗಗಳಲ್ಲಿ, ವಿಶೇಷವಾಗಿ ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ಪ್ರದೇಶಗಳಲ್ಲಿ, ಅಂತರ್ಜಲ ಮಟ್ಟ ಗಣನೀಯವಾಗಿ ಕುಸಿದಿದೆ. ಎಂದಿಗೂ ನೀರಿನಿಂದ […]
ಮನಸ್ಸಿಗೆ ಒತ್ತಡವೇ ಚಿಂತೆ ಬಿಡಿ? ನಿಮ್ಹಾನ್ಸ್ ತಯಾರಿಸಿರುವ “ಮೈಂಡ್ ನೋಟ್” ಆಪ್ ನಲ್ಲಿದೆ ಪರಿಹಾರ

ವೈದ್ಯರನ್ನು ನೇರವಾಗಿ ಭೇಟಿ ಮಾಡಲು ಹಿಂಜರಿಯುವವರಿಗೆ ಇದು ಉತ್ತಮ ಪರ್ಯಾಯ ಬೆಂಗಳೂರು: ಖಿನ್ನತೆ, ಆತಂಕ ಮತ್ತು ಒತ್ತಡದಂತಹ ಮಾನಸಿಕ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಿ, ಸ್ವ-ಮೌಲ್ಯಮಾಪನಕ್ಕೆ ನೆರವಾಗಲು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ‘ಮೈಂಡ್ ನೋಟ್’ ಆಪ್ ಅನ್ನು ಅಭಿವೃದ್ಧಿಪಡಿಸಿದೆ. ಈ ಆಪ್ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಲಭ್ಯವಿದೆ. ಸ್ವ-ಮೌಲ್ಯಮಾಪನಕ್ಕೆ ಸರಳ ವೇದಿಕೆ ಹಲವರಿಗೆ ತಮ್ಮ ಮಾನಸಿಕ ಸ್ಥಿತಿಯ ಬಗ್ಗೆ ಸ್ಪಷ್ಟ ಅರಿವು ಇರುವುದಿಲ್ಲ. ‘ಮೈಂಡ್ ನೋಟ್’ ಆಪ್ ಬಳಕೆದಾರರಿಗೆ ಪ್ರಶ್ನಾವಳಿ, […]
KSRTC: ಅಪ್ರೈಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿ ಪಡೆಯಲು ಇಚ್ಚಿಸುವ ಎಸ್.ಎಸ್.ಎಲ್.ಸಿ ಅಥವಾ ಐ.ಟಿ.ಐ ವಿದ್ಯಾರ್ಹತೆಯಲ್ಲಿ ಮೆಕ್ಯಾನಿಕ್ ಡಿಸೇಲ್, ಎಲೆಕ್ಟ್ರಿಷಿಯನ್, ಮೆಷಿನಿಸ್ಟ್, ಎಲೆಕ್ಟ್ರೋನಿಕ್ಸ್ ಮೆಕ್ಯಾನಿಕ್, ವೆಲ್ಡರ್, ಮೆಕ್ಯಾನಿಕ್ ಮೋಟರ್ ವೆಹಿಕಲ್, ಪ್ರೋಗ್ರಾಮಿಂಗ್ ಮತ್ತು ಸಿಸ್ಟಮ್ ಎಡ್ಮಿನಿಸ್ಟ್ರೇಟಿವ್ ಎಸಿಸ್ಟೆಂಟ್ ವೃತ್ತಿಗಳಲ್ಲಿ ಪಾಸಾದವರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಎಪ್ರಿಲ್ 21 ರಿಂದ ಮೇ 8 ರೊಳಗಾಗಿ ನಗರದ ಬಿಜೈನಲ್ಲಿರುವ ಕೆ.ಎಸ್.ಆರ್.ಟಿ.ಸಿ ವಿಭಾಗೀಯ ಕಛೇರಿಗೆ ಅರ್ಜಿ ಸಲ್ಲಿಸಬೇಕು. ಮೇ 12 ರಂದು ಬೆಳಿಗ್ಗೆ 10 ಗಂಟೆಗೆ ಮೂಲ ದಾಖಲಾತಿಗಳೊಂದಿಗೆ ಶಿಶಿಕ್ಷು ಆಯ್ಕೆ ಸಮಿತಿಯ ಮುಂದೆ ನೇರ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಕೆ.ಎಸ್.ಆರ್.ಟಿ.ಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
11 ಗಂಟೆಗೆ ಹೊರಬರಲಿದೆ ಎಸ್.ಎಸ್.ಎಲ್.ಸಿ. ರಿಸಲ್ಟ್: ವೆಬ್ ಸೈಟ್, ಡಿಜಿಲಾಕರ್ ಅಲ್ಲದೇ ಈ “ಆಪ್” ನಲ್ಲಿ ಬೇಗ ತಿಳೀಬೋದು ರಿಸಲ್ಟ್

ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ (KSEAB) 2026ರ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಫಲಿತಾಂಶ ತಿಳಿಯಲು ತುದಿಗಾಲಿನಲ್ಲಿ ನಿಂತಿದ್ದಾರೆ. ರಿಸಲ್ಟ್ ಹೊರಬರುತ್ತಿದ್ದಂತೆ ಒಂದೇ ಸಮಯದಲ್ಲಿ ಲಕ್ಷಾಂತರ ಮಂದಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವುದರಿಂದ ಸರ್ವರ್ ಬ್ಯುಸಿ, ಸೈಟ್ ಹ್ಯಾಂಗ್ ಆಗುವ ಸಾಧ್ಯತೆ ಹೆಚ್ಚಾಗಿದೆ. ಫಲಿತಾಂಶದ ದಿನ karresults.nic.in ಮುಂತಾದ ಅಧಿಕೃತ ಪೋರ್ಟಲ್‌ಗಳು ನಿಧಾನಗತಿಯಾಗುವುದು ಸಾಮಾನ್ಯ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಗಾಬರಿಯಾಗುವ ಅಗತ್ಯವಿಲ್ಲ. ವೆಬ್‌ಸೈಟ್ ಕಾರ್ಯನಿರ್ವಹಿಸದಿದ್ದರೂ ಫಲಿತಾಂಶವನ್ನು ಪಡೆಯಲು ಹಲವಾರು ಪರ್ಯಾಯ […]
ಮಲ್ಪೆ ಪ್ರವಾಸಕ್ಕೆಂದು ಬಂದಿದ್ದ ವ್ಯಕ್ತಿ ಸಾವು

ಉಡುಪಿ: ಪ್ರವಾಸಕ್ಕಾಗಿ ಮಲ್ಪೆಗೆ ಬಂದಿದ್ದ ವ್ಯಕ್ತಿಯೊಬ್ಬರು ವಾಸ್ತವ್ಯ ಹೂಡಿದ್ದ ಹೋಟೆಲ್ ರೂಮಿನಲ್ಲಿ ಮಲಗಿದ್ದಲ್ಲಿಯೇ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಬೆಂಗಳೂರು ಆನೇಕಲ್ ನಿವಾಸಿ ಧನಂಜಯ್ ಕೆ.ಎನ್. (37) ಎಂದು ಗುರುತಿಸಲಾಗಿದೆ. ಇವರು ಕಳೆದ ಸುಮಾರು ನಾಲ್ಕು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಏಪ್ರಿಲ್ 19ರಂದು ಸಂಜೆ ಸ್ನೇಹಿತರೊಂದಿಗೆ ಮಲ್ಪೆಗೆ ಪ್ರವಾಸಕ್ಕೆ ಆಗಮಿಸಿದ್ದ ಧನಂಜಯ್ ಅವರು ರೂಮಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಏಪ್ರಿಲ್ 20ರಂದು ಮಧ್ಯಾಹ್ನ ಅವರು ತೀವ್ರ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ […]