ಮಣಿಪಾಲ ಪೊಲೀಸರ ಕಾರ್ಯಾಚರಣೆ: ನಿಷೇಧಿತ ಮಾದಕ ದ್ರವ್ಯ ಎಂಡಿಎಂಎ ವಶ – ವಿದ್ಯಾರ್ಥಿ ಸೇರಿ 3 ಮಂದಿ ಡ್ರಗ್‌ ಪೆಡ್ಲರ್‌ಗಳ ಬಂಧನ..

ಉಡುಪಿ: ಮಣಿಪಾಲ ಪೊಲೀಸರು ಕಾರ್ಯಾಚರಣೆ ನಡೆಸಿ 22.11 ಗ್ರಾಂ ತೂಕದ 2.30 ಲ.ರೂ. ಮೌಲ್ಯದ ನಿಷೇಧಿತ ಮಾದಕ ದ್ರವ್ಯ ಎಂಡಿಎಂಎ ವಶಕ್ಕೆ ಪಡೆದಿದ್ದಾರೆ. ಓರ್ವ ವಿದ್ಯಾರ್ಥಿ ಸೇರಿದಂತೆ 3 ಮಂದಿ ಡ್ರಗ್‌ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಮೂಲತಃ ಮಹಾರಾಷ್ಟ್ರ ನಿವಾಸಿ, ಮಣಿಪಾಲದ ಎಂಐಟಿ ವಿದ್ಯಾರ್ಥಿ ಅಕ್ಷಯ್‌ ಕುಮಾವತ್‌ (36) ಬೆಂಗಳೂರಿನ ಸರ್ಜಾಪುರ ನಿವಾಸಿ ಶ್ರೀನಿವಾಸ ಗೌಡ (31), ಬಾಣಸವಾಡಿ ನಿವಾಸಿ ಐಸಾಕ್‌ ಶ್ಯಾಮ್‌ (29) ಬಂಧಿತರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗಳು ಉಡುಪಿ ಮತ್ತು ಮಣಿಪಾಲ ನಗರದ ವಿದ್ಯಾರ್ಥಿಗಳಿಗೆ […]