ಡಾ| ಪೈ ಸತತ ಪ್ರಯತ್ನ ಶೀಲತೆಯಿಂದಾಗಿ ಜಗದ ಕಣ್ಣು ಮಣಿಪಾಲದತ್ತ: ಪೇಜಾವರ ಶ್ರೀ
ಮಣಿಪಾಲ: ಡಾ| ಟಿಎಂಎ ಪೈ ಅವರ ಸತತ ಪ್ರಯತ್ನ ಶೀಲತೆಯಿಂದಾಗಿ ಇಂದು ಮಣಿಪಾಲವನ್ನು ಪ್ರಪಂಚವೇ ಕಣ್ಣೆತ್ತಿ ನೋಡುವಂತಾಗಿದೆ ಮತ್ತು ಉಡುಪಿಗೆ ಮಣಿಪಾಲ ಒಂದು ಹೆಮ್ಮೆಯ ಸಂಕೇತವಾಗಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದರು. ಮಣಿಪಾಲ ಸಮೂಹ ಸಂಸ್ಥೆಗಳ ವತಿಯಿಂದ ಹೊಟೇಲ್ ವ್ಯಾಲಿವ್ಯೂ ಸಭಾಂಗಣದಲ್ಲಿ ರವಿವಾರ ನಡೆದ ಸಂಸ್ಥಾಪಕರ ದಿನಾಚರಣೆಯಲ್ಲಿ (ಡಾ| ಟಿಎಂಎ ಪೈ ಅವರ 125ನೇ ಜನ್ಮದಿನ) ಮುಖ್ಯ ಅತಿಥಿಯಾಗಿ ಭಾಗವಹಿಸಿ ಆಶೀರ್ವಚನ ನೀಡಿದ ಶ್ರೀಪಾದರು, ಒಬ್ಬ ವ್ಯಕ್ತಿಯ ಜನ್ಮದಿನವನ್ನು ಸಾಮೂಹಿಕವಾಗಿ ಆಚರಿಸುವ ಹಿಂದೆ ಅವರು […]