ಮಣಿಪುರ ಪ್ರವಾಹ: 10 ಸಾವಿರ ಮನೆಗಳಿಗೆ ಹಾನಿ, 56 ಸಾವಿರ ಜನರಿಗೆ ಸಂಕಷ್ಟ; ಹಲವು ಪ್ರದೇಶಗಳು ಜಲಾವೃತ.

ಇಂಫಾಲ: ಮಣಿಪುರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ನದಿಗಳ ಉಕ್ಕಿ ಹರಿಯುತ್ತಿದ್ದು, ಒಡ್ಡುಗಳು ಒಡೆದು ಹಠಾತ್‌ ಪ್ರವಾಹ ಸಂಭವಿಸಿದೆ. ಪರಿಣಾಮ 56 ಸಾವಿರಕ್ಕೂ ಹೆಚ್ಚು ಜನರು ಸಂಕಷ್ಟಕ್ಕೀಡಾಗಿದ್ದು, 10,477 ಮನೆಗಳು ಹಾನಿಗೀಡಾಗಿವೆ ಎಂದು ಸರ್ಕಾರ ಮಂಗಳವಾರ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ಪ್ರವಾಹದಿಂದ ಒಟ್ಟು 56,516 174 ಜನರು ತೊಂದರೆಗೀಡಾಗಿದ್ದಾರೆ. ಪ್ರವಾಹ ಪೀಡಿತ ಪ್ರದೇಶದಿಂದ 2,913 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಸೋಮವಾರ ವ್ಯಕ್ತಿಯೊಬ್ಬರು ಇಂಫಾಲದ ಪೂರ್ವ ಜಿಲ್ಲೆಯಲ್ಲಿ ನದಿಯಲ್ಲಿ ಕೊಚ್ಚಿ ಹೋಗಿ ಕಾಣೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. […]