ಮಣಿಪುರ: ಬಾವಿಗೆ ಬಿದ್ದ ಚಿರತೆ ಮರಿಯ ರಕ್ಷಣೆ

ಉಡುಪಿ: ಬಾವಿಗೆ ಬಿದ್ದ ಚಿರತೆ ಮರಿಯನ್ನು ರಕ್ಷಿಸಿರುವ ಘಟನೆ ಮಣಿಪುರ ಗ್ರಾಮದ ಸಿ.ಎಸ್.ಐ.ಚರ್ಚ್ ಬಳಿ ಮಂಗಳವಾರ ನಡೆದಿದೆ. ಮಣಿಪುರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜೋನ್ ಸಿಕ್ವೆರಾ ಅವರ ಸಹೋದರ ಜೇಕಬ್ ಸಿಕ್ಕೇರಾ ಅವರ ಮನೆಯ ತೋಟದ ಬಾವಿಯಲ್ಲಿ ಚಿರತೆ ಮರಿಯೊಂದು ಬಾವಿಗೆ ಬಿದ್ದಿದ್ದು, ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿತ್ತು. ಅದರಂತೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಚಿರತೆಯನ್ನು ಬಾವಿಯಿಂದ ರಕ್ಷಿಸಿ ಸೋಮೇಶ್ವರ ಅಭಯಾರಣ್ಯಕ್ಕೆ ಕೊಂಡೊಯ್ಯದ್ದು ಬಿಟ್ಟಿದ್ದಾರೆ.ಜೇಕಬ್ ಸಿಕ್ಕೇರ ಅವರ ತೋಟದ […]