ತೃತೀಯ ಲಿಂಗಿಗಳಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಅಗತ್ಯ: ಮಂಜಮ್ಮ ಜೋಗತಿ

ಉಡುಪಿ: ತೃತೀಯ ಲಿಂಗಿಗಳಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಅಗತ್ಯ. ಸೂಕ್ತ ಅವಕಾಶಗಳು ಸಿಗದಿದ್ದರೆ ಅವರ ಪ್ರತ್ಯೇಕತೆ ಹೀಗೆಯೆ ಮುಂದುವರಿಯುತ್ತದೆ. ಈ ಸೌಲಭ್ಯಗಳನ್ನು ಸರ್ಕಾರ ಕಲ್ಪಿಸುವವರೆಗೂ ಪೊಲೀಸರು ತೃತೀಯ ಲಿಂಗಿಗಳ ವಿರುದ್ಧ ಕ್ರಮಕೈಗೊಳ್ಳಬಾರದು ಎಂದು ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿ ಅಭಿಪ್ರಾಯಪಟ್ಟಿದ್ದಾರೆ. ಸೋಮವಾರ ಅಜ್ಜರಕಾಡಿನ ಜಿಲ್ಲಾ ಗ್ರಂಥಾಲಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ, ಜಿಲ್ಲಾ ಗ್ರಂಥಾಲಯ ಮತ್ತು ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಆಶ್ರಯದಲ್ಲಿ ನಡೆದ ಸಂವಾದದಲ್ಲಿ ಅವರು ಮಾತನಾಡಿದರು. ತೃತೀಯ ಲಿಂಗಿಗಳು ಅನಿವಾರ್ಯ ಪರಿಸ್ಥಿತಿಯಲ್ಲಿ […]

ಪದ್ಮಶ್ರೀ ಮಂಜಮ್ಮ ಜೋಗತಿ ಬದುಕೇ ಒಂದು ಜೀವನ ಪಾಠ: ಡಾ. ತಲ್ಲೂರು ಶಿವರಾಮ ಶೆಟ್ಟಿ

ಉಡುಪಿ: ತೃತೀಯ ಲಿಂಗಿಯಾಗಿ ನಿರಂತರ ಸಂಘರ್ಷ ಜೀವನ ನಡೆಸಿ, ತನ್ನಂತಹ ಶೋಷಿತರ ಧ್ವನಿಯಾದ ಪದ್ಮಶ್ರೀ ಪುರಸ್ಕೃತೆ ಡಾ.ಮಂಜಮ್ಮ ಜೋಗತಿ ಅವರ ಬದುಕೇ ಅವರಂತಹ ತೊಳಲಾಟದ ಮಂದಿಗೆ ಜೀವನ ಪಾಠವಾಗಿದೆ ಎಂದು ತಲ್ಲೂರು ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕ ಹಾಗೂ ರಂಗಭೂಮಿ ಉಡುಪಿ ಇದರ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಉಡುಪಿಯ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ತಲ್ಲೂರು ಫ್ಯಾಮಿಲಿ ಟ್ರಸ್ಟ್, ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಜಿಲ್ಲಾ ಘಟಕ, ಜಾನಪದ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನ […]