ಬಂಟ್ವಾಳ ಬೆಂಜನಪದವು ತಾಲೂಕು ಕ್ರೀಡಾಂಗಣ ನಿರ್ಮಿಸಲು ಕೂಡಲೇ ಅನುದಾನ ಬಿಡುಗಡೆಗೊಳಿಸುವಂತೆ ಮಂಜುನಾಥ ಭಂಡಾರಿ ಪತ್ರ.

ಮಂಗಳೂರು: ಬಂಟ್ವಾಳ ತಾಲೂಕಿನ ಅಮ್ಮುಂಚೆ ಗ್ರಾಮದ ಬೆಂಜನಪದವು ಸರ್ಕಾರಿ ಪ್ರೌಢಶಾಲೆಯ ಹತ್ತಿರ ತಾಲ್ಲೂಕು ಕ್ರೀಡಾಂಗಣ ನಿರ್ಮಿಸಲು ಮಂಜೂರಾದ 10 ಕೋಟಿ ಅನುದಾನವನ್ನು ಬಿಡುಗಡೆ ಮಾಡುವ ಕುರಿತು ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲೇನಿದೆ?:ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಬೆಂಜನಪದವು ಸರ್ಕಾರಿ ಪ್ರೌಢಶಾಲೆಯ ಹತ್ತಿರದ ಒಟ್ಟು 5.25 ಎಕರೆ ಸ್ಥಳದಲ್ಲಿ ಆಟದ ಮೈದಾನದ ಅಭಿವೃದ್ಧಿಗಾಗಿ ಕರ್ನಾಟಕ ಸರ್ಕಾರದ ಯವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಈ ಹಿಂದೆ […]