ಮಣ್ಣಗುಡ್ಡ: 30 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗೆ ಶಾಸಕ ಕಾಮತ್ ಅವರಿಂದ ಗುದ್ದಲಿಪೂಜೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮಣ್ಣಗುಡ್ಡೆ ವಾರ್ಡಿನ ಮಂಗಳ ಕ್ರೀಡಾಂಗಣದ ಸಮೀಪ 30 ಲಕ್ಷ ರೂಪಾಯಿ ವೆಚ್ಚದಲ್ಲಿ ನಡೆಯುವ ತಡೆಗೋಡೆ ರಚನೆಯ ಕಾಮಗಾರಿಗೆ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು. ಈ ಕುರಿತು ಮಾತನಾಡಿದ ಶಾಸಕರು, ಈ ಹಿಂದೆ ಸ್ಥಳೀಯರು ನನ್ನನ್ನು ಭೇಟಿ ಮಾಡಿ ತಡೆಗೋಡೆಯ ಕಾಮಗಾರಿ ನಡೆಸುವಂತೆ ಕೇಳಿಕೊಂಡಿದ್ದರು. ಕೇಂದ್ರ ಸರಕಾರದಿಂದ ನೀಡಲಾಗುವ ಹದಿನಾಲ್ಕನೇ ಹಣಕಾಸು ವ್ಯವಸ್ಥೆಯ ಅನುದಾನದಡಿಯಲ್ಲಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. 30 ಲಕ್ಷ ರೂಪಾಯಿ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣವಾಗಲಿದ್ದು, ಶೀಘ್ರವೇ […]