ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಮಣ್ಣಪಳ್ಳದಲ್ಲಿ ಕ್ರಾಫ್ಟ್ ವಿಲೇಜ್ ಮಾಡುವ ಚಿಂತನೆ: ಜಿಲ್ಲಾಧಿಕಾರಿ
ಉಡುಪಿ: ಮಣಿಪಾಲದ ಮಣ್ಣಪಳ್ಳವನ್ನು ಪ್ರವಾಸೀ ತಾಣವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಅಲ್ಲಿ ಕ್ರಾಫ್ಟ್ ವಿಲೇಜ್ ಮಾಡುವ ಬಗ್ಗೆ ಚಿಂತನೆ ಮತ್ತು ಅಗತ್ಯ ರೂಪುರೇಷೆಗಳನ್ನು ಸಿದ್ದಪಡಿಸುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಣ್ಣಪಳ್ಳದಲ್ಲಿ ವಾರದ ಮಾರುಕಟ್ಟೆ, ಆಹಾರ ಮೇಳ ಮತ್ತು ಕರಕುಶಲ ವಸ್ತುಪ್ರದರ್ಶನ ಮುಂತಾದ ಕಾರ್ಯಕ್ರಮಗಳ ಮೂಲಕ ದೆಹಲಿ ಹಾಟ್ ಮಾದರಿಯಲ್ಲಿ ಕ್ರಾಫ್ಟ್ ವಿಲೇಜ್ ಮಾಡಲು […]