ಹಿರಿಯ ಪತ್ರಕರ್ತ, ಖ್ಯಾತ ನಿರೂಪಕ ಮನೋಹರ್ ಪ್ರಸಾದ್ ಇನ್ನಿಲ್ಲ
ಮಂಗಳೂರು: ಉದಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತದ ಮನೋಹರ್ ಪ್ರಸಾದ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಪದವಿ ಶಿಕ್ಷಣ ಪೂರ್ತಿಗೊಳಿಸಿ ನವ ಭಾರತ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ಉದಯವಾಣಿ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಆಗಿದ್ದ ಅವರು ಬಳಿಕ ಸಹಾಯಕ ಸಂಪಾದಕರಾಗಿದ್ದರು. ಇದರೊಂದಿಗೆ ಉದಯವಾಣಿಯಲ್ಲಿ ಸತತ 36 ವರ್ಷಗಳ ಸೇವೆ ಸಲ್ಲಿಸಿದ್ದ ಅವರು […]