ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನದ ಹರಿಕಾರ ಮನೋಜ್ ಕಡಬ ಇವರಿಗೆ ಹೊರಜಿಲ್ಲಾ ಸನ್ಮಾನ
ಉಡುಪಿ: ಉಡುಪಿಯ ಮನೋಜ್ ಕಡಬ ಅವರು ಕನ್ನಡ ಮಾಧ್ಯಮ ಶಾಲೆ ಉಳಿಸಲು ರಾಜ್ಯಾದ್ಯಂತ ಆಂದೋಲನ ಆರಂಭಿಸಿದ್ದು ಅವರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಧಾರವಾಡದ ಡಿಕೆಎಚ್ ಫೌಂಡೇಶನ್ ಇದರ 3ನೇ ವಾರ್ಷಿಕೋತ್ಸವದಲ್ಲಿ ‘ರಾಜನಕ್ಷತ್ರ’ ಚಲನಚಿತ್ರದ ಪೋಸ್ಟರ್ ಬಿಡುಗಡೆ ಸಮಾರಂಭದಂದು ಸನ್ಮಾನಿಸಿ ಗೌರವಿಸಲಾಯಿತು. ಮನೋಜ್ ಕಡಬ ಇವರು ಸ್ಪೋಕನ್ ಇಂಗ್ಲಿಷ್ ಕಲಿಸುವ ಮೂಲಕ ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನದ ಹರಿಕಾರರಾಗಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಉಡುಪಿ ಮತ್ತು ದ.ಕ. ಜಿಲ್ಲೆಗಳಲ್ಲಿ ಈ ಬಗ್ಗೆ ಕೆಲಸ ಮಾಡುತ್ತಿದ್ದು, ಮುಂದಿನ ವರ್ಷ ರಾಜ್ಯದಾದ್ಯಂತ […]
ರಾಜ್ಯಮಟ್ಟದ 6ನೇ ಶಿಕ್ಷಕ ಸಾಹಿತಿಗಳ ಸಮ್ಮೇಳನ: ಮನೋಜ್ ಕಡಬ ಇವರಿಗೆ ಅಮೃತ ಸಮ್ಮಾನ್ ಪ್ರಶಸ್ತಿ
ಉಡುಪಿ: ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು (ರಿ), ಕೇಂದ್ರ ಸಮಿತಿ ಹುಬ್ಬಳ್ಳಿ ಮತ್ತು ಶ್ರೀ ಜನಾರ್ದನ ಮಹಾಂಕಾಳಿ ದೇವಸ್ಥಾನ ಸಮಿತಿ, ಅಂಬಲಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಸೆಪ್ಟಂಬರ್ 5 ಮಂಗಳವಾರದಂದು ಅಂಬಲಪಾಡಿಯಲ್ಲಿ ನಡೆದ ಶಿಕ್ಷಕ ಸಾಹಿತಿಗಳ 6ನೇ ಸಮ್ಮೇಳನ ಸಂಭ್ರಮ ಕಾರ್ಯಕ್ರಮದಲ್ಲಿ ಇತರ ಸಾಧಕರೊಂದಿಗೆ ಮನೋಜ್ ಕಡಬ ಅವರು ರಾಜ್ಯಮಟ್ಟದ ಅಮೃತ ಸಮ್ಮಾನ ಗೌರವ ಪ್ರಶಸ್ತಿಯನ್ನು ಸ್ವೀಕರಿಸಿದರು. ಉಡುಪಿಯ ಶೆಫಿನ್ಸ್ ಇಂಗ್ಲಿಷ್ ಅಕಾಡೆಮಿಯ ನಿರ್ದೇಶಕ ಮತ್ತು ಸ್ಪೋಕನ್ ಇಂಗ್ಲಿಷ್ ತರಬೇತುದಾರರಾದ ಅವರು ದಕ್ಷಿಣ ಕನ್ನಡ ಮತ್ತು ಉಡುಪಿ […]