ಉಡುಪಿ: ಮಾನ್ಸಿ ಜೆ ಸುವರ್ಣ ಗೆ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕ

ಉಡುಪಿ: ಉತ್ತರ ಪ್ರದೇಶದ ಗ್ರೇಟರ್ ನೊಯಿಡಾದಲ್ಲಿ ನಡೆದ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಉಡುಪಿ ಜಿಲ್ಲೆಯ ಮಾನ್ಸಿ ಜೆ ಸುವರ್ಣ ಕಂಚಿನ ಪದಕ ಗೆದ್ದಿದ್ದಾರೆ.ಅವರ ಈ ಸಾಧನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಶ್ಲಾಘಿಸಿದ್ದಾರೆ. ಮೀನುಗಾರಿಕೆಯಲ್ಲಿ ತೊಡಗಿರುವ ಮಲ್ಪೆಯ ಮಾಲತಿ ಹಾಗೂ ಜಗದೀಶ್ ಸುವರ್ಣ ದಂಪತಿ ಪುತ್ರಿ ಮಾನ್ಸಿ ಗೆದ್ದಿರುವ ಕಂಚಿನ ಪದಕ ರಾಜ್ಯದ ಇತರ ಬಾಕ್ಸರ್‌ಗಳಿಗೆ ಸ್ಫೂರ್ತಿಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಬಾಕ್ಸಿಂಗ್ ಕ್ರೀಡೆ […]