ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ಮನು ಹಂದಾಡಿಯವರಿಂದ ನಗೆ ಹಬ್ಬ ಕಾರ್ಯಕ್ರಮ
ಕುಂದಾಪುರ : ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ, ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಮಾತೃಭಾಷೆಯನ್ನು ಉಳಿಸಿ ಬೆಳೆಸಬಹುದು ಎನ್ನುವುದನ್ನು ತೋರಿಸಿಕೊಟ್ಟ ಮನು ಹಂದಾಡಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮನು ಹಂದಾಡಿಯವರಿಂದ ವಿದ್ಯಾರ್ಥಿಗಳಿಗಾಗಿ ‘ನಗೆ ಹಬ್ಬ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕುಂದಾಪ್ರ ಕನ್ನಡದ ಕಂಪನ್ನು ಪಸರಿಸುತ್ತಾ ಸಮಾಜದಲ್ಲಿರುವ ಶಿಕ್ಷಣವಂತ, ಅಕ್ಷರವಂತ, ವಿದ್ಯಾವಂತರ ನಡುವೆ ಇರುವ ವ್ಯತ್ಯಾಸವನ್ನು ತಿಳಿಸುವುದರ ಮೂಲಕ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಮೌಲ್ಯಗಳನ್ನು […]