ಮಾ.30: ಮರಗಳ ತೆರವು ಕುರಿತು ಸಾರ್ವಜನಿಕ ಅಹವಾಲು ಸಭೆ

ಉಡುಪಿ: ವಾರಾಹಿ ಏತ ನೀರಾವರಿ ಕಾಮಗಾರಿ ಉದ್ದೇಶಕ್ಕಾಗಿ, ಕುಂದಾಪುರ ತಾಲೂಕು ಹಾಲಾಡಿ ಮತ್ತು ಬ್ರಹ್ಮಾವರ ತಾಲೂಕು ಯಡ್ತಾಡಿ ಗ್ರಾಮಗಳಲ್ಲಿ ಕಾದಿರಿಸಿದ ಸ್ಥಳಗಳಲ್ಲಿ ಕಾಲುವೆ ನಿರ್ಮಾಣಕ್ಕೆ ಅಡಚಣೆಯಾಗುವ ಒಟ್ಟು 243 ಮರಗಳನ್ನು ತೆರವುಗೊಳಿಸುವ ಕುರಿತು, ಮಾರ್ಚ್ 30 ರಂದು ಮಧ್ಯಾಹ್ನ 3 ಗಂಟೆಗೆ ಉಡುಪಿ ವಲಯ ಅರಣ್ಯ ಅಧಿಕಾರಿಯವರ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸಭೆಯನ್ನು ಕರೆಯಲಾಗಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, […]