ಅಕ್ರಮ‌ ಮರಳು ಸಾಗಾಟ: ಲಾರಿ ವಶ

ಮಂಗಳೂರು: ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ಮರಳು ಲಾರಿಯನ್ನು ಮಂಗಳೂರಿನ ಪಡೀಲ್ ಜಂಕ್ಷನ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ. KA-46-3202 ಲಾರಿಯನ್ನು ಪರಿಶೀಲಿಸಿದಾಗ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಳು ಸಾಗಿಸುತ್ತಿರುವುದು ಪತ್ತೆಯಾಗಿದೆ. ಲಾರಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ. ಸುಮಾರು 10  ಲಕ್ಷ ರೂ.‌ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮರಳು ಹೋರಾಟ ಸಮಿತಿಯ ಧರಣಿಯಲ್ಲಿ ಸಚಿವ ರಾಜಶೇಖರ ಪಾಟೀಲ್‌ ಹೇಳಿಕೆ ಕರಾವಳಿ ಭಾಗಕ್ಕೆ ಪ್ರತ್ಯೇಕ ಮರಳು ನೀತಿ

ಉಡುಪಿ: ಜನರಿಗೆ ಅತೀ ಕಡಿಮೆ ದರದಲ್ಲಿ ಸುಲಭವಾಗಿ ಮರಳು ಸಿಗಬೇಕು. ಆ ನಿಟ್ಟಿನಲ್ಲಿ ಕರಾವಳಿಯಮೂರು ಜಿಲ್ಲೆಗಳಿಗೆ ಪ್ರತ್ಯೇಕ ಮರಳು ನೀತಿಯನ್ನು ಜಾರಿಗೊಳಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಪಾಟೀಲ್‌ ಹೇಳಿದರು. ಅವರು ಮಂಗಳವಾರ ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದ ಮರಳುಗಾರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ನೇತೃತ್ವದಲ್ಲಿ ಮರಳು ಹೋರಾಟ ಸಮಿತಿ ವತಿಯಿಂದ ನಡೆಯುತ್ತಿರುವ ಎರಡನೇ ದಿನದ ಧರಣಿಯಲ್ಲಿ ಭಾಗವಹಿಸಿ ಹೋರಾಟಗಾರರ ಸಮಸ್ಯೆಗಳನ್ನು ಆಲಿಸಿ ಮಾತನಾಡಿದರು. ಈಗಾಗಲೇ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅದಿಕಾರಿಗಳೊಂದಿಗೆ […]