ಪಿಟಿಸಿಎಲ್ ವ್ಯಾಪ್ತಿಗೆ ಒಳಪಡುವ ಜಮೀನು ಜಿಲ್ಲಾಧಿಕಾರಿ ಹಂತದಲ್ಲಿ ಭೂ ಪರಿವರ್ತನೆಗೆ ಅವಕಾಶ: ಶಾಸಕ ರಘುಪತಿ ಭಟ್ ಗೆ ಅಭಿನಂದನೆ
ಉಡುಪಿ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮಂಜೂರಾದ ಜಮೀನಿನಲ್ಲಿ 10 ಸೆಂಟ್ಸ್ ವರೆಗಿನ ಜಮೀನನ್ನು ಸ್ವಂತ ವಾಸ್ತವ್ಯದ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಲು ಜಿಲ್ಲಾಧಿಕಾರಿಯವರ ಹಂತದಲ್ಲೇ ಅವಕಾಶ ಕಲ್ಪಿಸಿ ನ. 05 ರಂದು ಸರ್ಕಾರ ಆದೇಶ ಹೊರಡಿಸಿದೆ. ಈ ವಿಚಾರದ ಕುರಿತು ಶಾಸಕ ರಘುಪತಿ ಭಟ್ ಸದನದಲ್ಲಿ ವಿಷಯ ಪ್ರಸ್ತಾಪಿಸಿ, ಶೀಘ್ರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು. ಅಲ್ಲದೆ ಸರ್ಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಿ ಅಧಿಕಾರಿಗಳ ಗಮನಕ್ಕೆ ತಂದು […]