ಡಿ.23: ಮರಾಠಿ ಸಮಾಜ ಸೇವಾ ಸಂಘದ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಕಾರ್ಕಳ: ತಾಲ್ಲೂಕು ಮರಾಠಿ ಸಮಾಜ ಸೇವಾ ಸಂಘದ ವತಿಯಿಂದ ಸಂಘದ ರಜತ ಮಹೋತ್ಸವ ಹಾಗೂ ಶಿವಾಜಿ ಜಯಂತಿಯ ಅಂಗವಾಗಿ ತಾಲ್ಲೂಕು ಮಟ್ಟದ ಕ್ರೀಡಾಕೂಟ ಕಾರ್ಕಳ ಭುವನೇಂದ್ರ ಕಾಲೇಜಿನ ಬಳಿಯ ತಾಲ್ಲೂಕು ಕ್ರೀಡಾಂಗಣದಲ್ಲಿ ಡಿ. 23ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ರಾಘವ ನಾಯ್ಕ್ ಹೇಳಿದರು. ಉಡುಪಿ ಜಿಲ್ಲಾ ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್. ಅನಂತ ನಾಯ್ಕ್ ಬೆಳಗ್ಗೆ 9 ಗಂಟೆಗೆ ಕ್ರೀಡಾಕೂಟವನ್ನು ಉದ್ಘಾಟಿಸುವರು. ಕಾರ್ಕಳ ಯುವಜನ ಸೇವೆಯ ಸಹಾಯಕ ಕ್ರೀಡಾಧಿಕಾರಿಯ ಫ್ರೆಡ್ರಿಕ್ ರೆಬೆಲ್ಲೋ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. […]