ಮರವಂತೆ ಮಹಾರಾಜ ಶ್ರೀ ವರಾಹ ಸ್ವಾಮಿ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಸಂಪನ್ನ
ಕುಂದಾಪುರ: ಮರವಂತೆ ಮಹಾರಾಜ ಶ್ರೀ ವರಾಹ ಸ್ವಾಮಿ ದೇವಸ್ಥಾನದಲ್ಲಿ ಬುಧವಾರದಂದು ಕರ್ಕಾಟಕ ಅಮಾವಾಸ್ಯೆ ಜಾತ್ರೆ ನಡೆಯಿತು. ಅಂದು ಬೆಳಗ್ಗಿನ ಜಾವದಿಂದಲೇ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ಜಾತ್ರೆಯಲ್ಲಿ ಪಾಲ್ಗೊಂಡರು. ಭಕ್ತರು ಸಮುದ್ರ ಸ್ನಾನ ನೆರವೇರಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಜಾತ್ರೆಯ ಪ್ರಯುಕ್ತ ದೇವಾಲಯವನ್ನು ಹೂವುಗಳಿಂದ ಸುಂದರವಾಗಿ ಸಿಂಗರಿಸಲಾಗಿತ್ತು. ದೇವಾಲಯದ ಆಡಳಿತ ಮಂಡಳಿ ಮಾತು ಸ್ವಯಂಸೇವಕರು ಅಚ್ಚುಕಟ್ಟಾದ ವ್ಯವಸ್ಥೆ ಕಲ್ಪಿಸಿ ಸಾರ್ವಜನಿಕರಿಗೆ ದೇವರ ದರ್ಶನದ ವ್ಯವಸ್ಥೆ ಮಾಡಿದರು. ಸಾವಿರಾರು ಭಕ್ತರು ದೇವರ ದರ್ಶನ […]
ಆ.16 ರಂದು ಮರವಂತೆ ಶ್ರೀ ಮಹಾರಾಜ ಶ್ರೀ ವರಾಹ ಸ್ವಾಮಿ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ
ಕುಂದಾಪುರ: ಮರವಂತೆಯ ಅರಬ್ಬೀ ಸಮುದ್ರ ಹಾಗೂ ಸೌಪರ್ಣಿಕಾ ನದಿ ತಟದಲ್ಲಿರುವ ಶ್ರೀ ಮಹಾರಾಜ ಶ್ರೀ ವರಾಹ ಸ್ವಾಮಿ ದೇವಸ್ಥಾನದಲ್ಲಿ ಈ ಬಾರಿಯ ಕರ್ಕಾಟಕ ಅಮಾವಾಸ್ಯೆ ಜಾತ್ರೆಯು ಜು.17 ಕ್ಕೆಂದು ಕೆಲವು ಕ್ಯಾಲೆಂಡರ್‌ಗಳಲ್ಲಿ ತಪ್ಪಾಗಿ ಪ್ರಕಟಣೆಗೊಂಡಿದ್ದು ಈ ವರ್ಷ ಆ.16 ರಂದು ಮರವಂತೆ ಜಾತ್ರೆ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ. ಕರ್ಕಾಟಕ ಮಾಸದಲ್ಲಿ ಬರುವ ಅಮಾವಾಸ್ಯೆ ದಿನ ಶ್ರೀ ವರಾಹ ಸ್ವಾಮಿಯ ವಾರ್ಷಿಕ ಹಬ್ಬ ನಡೆಯುವುದು ದೇವಸ್ಥಾನದ ಪರಂಪರೆಯಾಗಿದೆ. ಆದರೆ ಕೆಲವು ಕ್ಯಾಲೆಂಡರ್ ಹಾಗೂ ಪಂಚಾಂಗದಲ್ಲಿ ಜು. […]
ಮರವಂತೆ: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಹುದ್ದೆ ಖಾಲಿ
ಮರವಂತೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯಾಧಿಕಾರಿ – 2 ಹುದ್ದೆಗಳಿಗೆ (ಪ.ಜಾತಿ-1, ಸಾ.ಅ-1 ಹುದ್ದೆ) ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಅಥವಾ ನೇರ ನೇಮಕಾತಿ ಆಗುವವರೆಗೆ / ಖಾಯಂ ವೈದ್ಯರು ವರ್ಗಾವಣೆಯಿಂದ ಹುದ್ದೆ ಭರ್ತಿಯಾಗುವವರೆಗೆ ನೇಮಕಾತಿ ಮಾಡಿಕೊಳ್ಳಲು ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿದ ಅರ್ಹ ವೈದ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 27 […]
ಮರವಂತೆ: ಚಲಿಸುತ್ತಿದ್ದ ಕಾರು ಸಮುದ್ರ ಪಾಲು; ಓರ್ವ ಮೃತ್ಯು, ಇನ್ನೋರ್ವ ನಾಪತ್ತೆ
ಮರವಂತೆ: ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ನಾಲ್ವರ ಪೈಕಿ ಓರ್ವ ಮೃತಪಟ್ಟು, ಇನ್ನೋರ್ವ ನಾಪತ್ತೆಯಾಗಿರುವ ಘಟನೆ ಮರವಂತೆ ಬೀಚ್ ನ ರಾಷ್ಟ್ರೀಯ ಹೆದ್ದಾರಿ 66 ರ ಬಳಿ ನಿನ್ನೆ ಮಧ್ಯರಾತ್ರಿ ಸಂಭವಿಸಿದೆ. ಮೃತರನ್ನು ಬೀಜಾಡಿಯ ಗೋಳಿಬೆಟ್ಟು ನಿವಾಸಿ, ವಿಲಾಸ್ ಮಾರ್ಬಲ್ ನ ಮಾಲೀಕ ರಮೇಶ್ ಆಚಾರ್ ನೇರಂಬಳ್ಳಿಯವರ ಪುತ್ರ ವಿರಾಜ್ ಆಚಾರ್ಯ(28) ಎಂದು ಗುರುತಿಸಲಾಗಿದೆ. ಸಹೋದರ ಸಂಬಂಧಿಗಳಾದ ರೋಶನ್ ನಾಪತ್ತೆಯಾಗಿದ್ದು, ಸಂದೇಶ್, ಕಾರ್ತಿಕ್ ಅವರನ್ನು ರಕ್ಷಿಸಲಾಗಿದೆ. ರೋಶನ್ ಸಮುದ್ರದಲ್ಲಿ ಕೊಚ್ಚಿ […]
ಸ್ವಾವಲಂಬಿ ಗ್ರಾಮದಿಂದ ಸ್ವಾವಲಂಬಿ ಭಾರತದ ಸಂಕಲ್ಪ: ಕೆ. ವಿಜಯ್ ಕೊಡವೂರು
ಉಡುಪಿ: ಜೂನ್ 02 ರಂದು ಮರವಂತೆಯ ಸಾಧನಾ ಸಭಾಭವನದಲ್ಲಿ ಸ್ವಾವಲಂಬಿ ಭಾರತ ಅಭಿಯಾನದ ಅಂಗವಾಗಿ ಸ್ವಾವಲಂಬಿ ಗ್ರಾಮ ಬೈಠಕ್ ಕಾರ್ಯಕ್ರಮವು ನಡೆಯಿತು. ವಿದ್ಯಾವಂತರು ನಿರೋದ್ಯೋಗಿಗಳಾದಲ್ಲಿ ಕುಡಿತ, ಡ್ರಗ್ಸ್ ಮುಂತಾದ ದುಷ್ಟತಗಳು ಹೆಚ್ಚಾಗಿ ಕಳ್ಳತನ, ದರೋಡೆ, ಲೂಟಿ ಮಾಡಿ ಸಮಾಜವನ್ನು ಕೆಡಿಸುತ್ತಾರೆ. ಈ ಕಾರಣಕ್ಕಾಗಿ ಅವರಿಗೆ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ಸ್ವ ಉದ್ಯೋಗ ಕೈಗೊಳ್ಳುವಂತೆ ನಾವೆಲ್ಲರೂ ಪ್ರೋತ್ಸಾಹಿಸಿದರೆ ಅವರು ತಮ್ಮ ಸ್ವಂತ ಕಾಲಿನಲ್ಲಿ ನಿಂತು ಬೆಳೆದು ಸಮಾಜದ ಕಷ್ಟಗಳಿಗೆ ಸ್ಪಂದಿಸುತ್ತಾರೆ ಎಂದು ಜಿಲ್ಲಾ ಸಮನ್ವಯಕ […]