ರಂಗಭೂಮಿ ಉಡುಪಿ ಆಶ್ರಯದಲ್ಲಿ ಮರವೇ ಮರ‍್ಮರವೇ ಬೀದಿ ನಾಟಕ ಪ್ರದರ್ಶನ

ಉಡುಪಿ: ನಮ್ಮ ಸಮಾಜ, ಜನ ಸಾಮಾನ್ಯರು ಬದುಕಿನಲ್ಲಿ ಎದುರಿಸುತ್ತಿರುವ ಬವಣೆಗಳು, ಸಾಮಾಜಿಕ ಸಂಘರ್ಷಗಳ ಬಗ್ಗೆ ಬೀದಿ ನಾಟಕಗಳು ಬೆಳಕು ಚೆಲ್ಲಿ ಜಾಗೃತಿಯನ್ನುಂಟು ಮಾಡುವ ಕಾರ್ಯ ಮಾಡುತ್ತಿವೆ ಎಂದು ರಂಗಭೂಮಿ ಉಡುಪಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಭಾನುವಾರ ರಂಗಭೂಮಿ ಉಡುಪಿ ಆಶ್ರಯದಲ್ಲಿ ಕಿನ್ನರ ಮೇಳ ತುಮರಿ ಪ್ರಸ್ತುತಿಯಲ್ಲಿ ರಥಬೀದಿಯ ಪೇಜಾವರ ಮಠದ ಮುಂಭಾಗದಲ್ಲಿ ನಡೆದ ಡಾ.ಚಂದ್ರಶೇಖರ ಕಂಬಾರರು ರಚಿಸಿದ ಮೂರು ಕಥೆಗಳನ್ನು ಆಧಾರಿಸಿದ ‘ಮರವೇ ಮರ‍್ಮರವೇ..!’ ಬೀದಿ ನಾಟಕದ ಪ್ರಥಮ ಪ್ರದರ್ಶನ ಹಾಗೂ ಉದ್ಘಾಟನಾ […]