ಮಾರಣಕಟ್ಟೆ ಶ್ರೀ ಬ್ರಹ್ಮ ಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಮಹೋತ್ಸವ, ಎಲ್ಲೆಲ್ಲೂ ಜನ ಜಾತ್ರೆಯ ವೈಭವ

ಕುಂದಾಪುರ : ಉಡುಪಿ ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಶ್ರೀ ಆದಿ ಶಂಕರಾಚಾರ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಕ್ಷೇತ್ರ ಎನ್ನುವ ಹೆಸರನ್ನು ಪಡೆದುಕೊಂಡಿರುವ ತಾಲ್ಲೂಕಿನ ಮಾರಣಕಟ್ಟೆಯ ಶ್ರೀ ಬ್ರಹ್ಮ ಲಿಂಗೇಶ್ವರ ದೇವಸ್ಥಾನದಲ್ಲಿ ಬುಧವಾರ ಹಾಗೂ ಗುರುವಾರ ನಡೆಯಲಿರುವ ಕೆಂಡ ಮಹೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವಕ್ಕಾಗಿ ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಮಕರ ಸಂಕ್ರಾಂತಿಯಂದು ರಾತ್ರಿ ನಡೆಯುವ ಕೆಂಡ ಮಹೋತ್ಸವದಲ್ಲಿ ಜಾತಿ ಬೇಧವಿಲ್ಲದೆ, ಮಹಿಳೆಯರು, ಗಂಡಸರು, ಮಕ್ಕಳೆನ್ನದೆ ಸಾವಿರಾರು ಜನರು ಕೆಂಡದ ರಾಶಿಯನ್ನು ತುಳಿಯುವ ಮೂಲಕ […]