ಅಪ್ರಾಪ್ತ ಬಾಲಕಿ ಜೊತೆಗೆ ಮದುವೆ: ಗ್ರಾ.ಪಂ ಅಧ್ಯಕ್ಷನ ವಿರುದ್ಧ POCSO ಪ್ರಕರಣ ದಾಖಲು!

ಬೆಳಗಾವಿ: ಅಪ್ರಾಪ್ತ 15 ವರ್ಷದ ಬಾಲಕಿ ಜೊತೆ ಮದುವೆಯಾದ ಆರೋಪದ ಮೇರೆಗೆ ಬೆಳಗಾವಿ ಗ್ರಾಮ ಪಂಚಾಯಿತಿ ಅಧ್ಯಕ್ಷನ ವಿರುದ್ಧ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ POCSO ಪ್ರಕರಣ ದಾಖಲಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬಸ್ಸಾಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಭೀಮಶಿ ಕಾಳಿಮನಿ ಎಂಬಾತನ ವಿರುದ್ಧ 15 ವರ್ಷದ ಬಾಲಕಿಯನ್ನು ವಿವಾಹವಾದ ಆರೋಪ ಹೊರಿಸಲಾಗಿದೆ. ನವೆಂಬರ್ 2023 ರಲ್ಲಿ ನಡೆದ ಈ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಕಾಳಿಮಣಿ ನವೆಂಬರ್ 5, 2023 ರಂದು ಅಪ್ರಾಪ್ತ ಬಾಲಕಿಯನ್ನು ವಿವಾಹವಾಗಿದ್ದ. […]