ಪ್ರಿಯಕರನ ಎದುರಿನಲ್ಲೇ ಪೆಟ್ರೋಲ್ ಸುರಿದು ಬೆಂಕಿಹಚ್ಚಿಕೊಂಡು ವಿವಾಹಿತ ಮಹಿಳೆ ಆತ್ಮಹತ್ಯೆ
ಚಿಕ್ಕಮಗಳೂರು: ವಿವಾಹಿತ ಮಹಿಳೆಯೊಬ್ಬಳು ಪ್ರಿಯಕರನ ಎದುರಿನಲ್ಲಿಯೇ ಪೆಟ್ರೋಲ್ ಸುರಿದು ಬೆಂಕಿಹಚ್ಚಿಕೊಂಡು ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಬಿಳಗುಳ ಗ್ರಾಮದಲ್ಲಿ ನಡೆದಿದೆ. ಬಿಳಗುಳ ನಿವಾಸಿ ಸವಿತಾ (42) ಆತ್ಮಹತ್ಯೆಗೆ ಶರಣಾದ ಮಹಿಳೆ. ಈಕೆ ವೈಯುಕ್ತಿಕ ಕಾರಣದಿಂದ ಪತಿಯನ್ನು ಬಿಟ್ಟು ತವರು ಮನೆಯ ಬಳಿ ಹೋಂ ಸ್ಟೇ ಒಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು. ಆಗ ಅಲ್ಲೇ ಸಮೀಪದ ದುರ್ಗಾ ಪರಮೇಶ್ವರಿ ಎಸ್ಟೇಟ್ನಲ್ಲಿ ರೈಟರ್ ಆಗಿ ಕೆಲಸ ಮಾಡ್ತಿದ್ದ ಕೊಲ್ಲಿಬೈಲ್ ನಿವಾಸಿ ನಂದೀಶ (28) ಎಂಬುವವನ ಪರಿಚಯವಾಗಿ ಅದು ಪ್ರೀತಿಗೆ ತಿರುಗಿತ್ತು. […]