ಹೈದರಾಬಾದ್ನಲ್ಲಿ ನಾಳೆ ಅದ್ದೂರಿಯಾಗಿ ನಡೆಯಲಿದೆ ನಟ ವರುಣ್ ತೇಜ್ – ಲಾವಣ್ಯ ತ್ರಿಪಾಠಿ ನಿಶ್ಚಿತಾರ್ಥ
ತೆಲುಗು ನಟ ವರುಣ್ ತೇಜ್ ಮತ್ತು ನಟಿ ಲಾವಣ್ಯ ತ್ರಿಪಾಠಿ ಮದುವೆ ವಿಚಾರ ಸದ್ಯ ಟಾಲಿವುಡ್ನಲ್ಲಿ ಹಾಟ್ ಟಾಪಿಕ್ ಆಗಿದೆ. ಇವರಿಬ್ಬರು ಕೆಲ ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದಾರೆ. ನಟ ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ನಿಶ್ಚಿತಾರ್ಥ ನಾಳೆ ಹೈದರಾಬಾದ್ನಲ್ಲಿ ನಡೆಯಲಿದೆ. ಜೂನ್ 9 ರಂದು ಈ ಜೋಡಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದು, ಅದಕ್ಕಾಗಿ ಸಕಲ ಸಿದ್ಧತೆಗಳು ನಡೆಯುತ್ತಿದೆ ಎಂಬ ಸುದ್ದಿ ಕೆಲ ದಿನಗಳಿಂದ ಕೇಳಿ ಬರುತ್ತಿತ್ತು. ಅದರಂತೆ ಈ ಜೋಡಿ ನಾಳೆ ಹಿರಿಯರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. […]