ನೀಲಾವರ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಸಂಪನ್ನ
ಮಂದಾರ್ತಿ: ನೀಲಾವರ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ ಬುಧವಾರ ವಿಜಯದಶಮಿಯಂದು ಸಂಜೆ ಸಾಮೂಹಿಕ ದೀಪ ನಮಸ್ಕಾರ ಪೂಜೆ ಮೂಲಕ ವಿಜೃಂಭಣೆಯಿಂದ ಸಂಪನ್ನಗೊಂಡಿತು. ನವರಾತ್ರಿ ಪರ್ಯಂತ ದಿನಂಪ್ರತಿ ದುರ್ಗಾ ಹೋಮ, ಅನ್ನಸಂತರ್ಪಣೆ ನಡೆಯಿತು. ಶುಕ್ರವಾರ ವಿಜಯದಶಮಿಯಂದು ಚಂಡಿಕಾಯಾಗ, ಮಹಾ ಅನ್ನ ಸಂತರ್ಪಣೆ ಮತ್ತು ಸಂಜೆ ಸಾಮೂಹಿಕ ದೀಪ ನಮಸ್ಕಾರ ಪೂಜೆ ನಡೆಯಿತು. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್. ರಘರಾಮ ಮಧ್ಯಸ್ಥ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ದೇವಳದ ಅರ್ಚಕರಾದ ಕೃಷ್ಣ ಅಡಿಗ, ಚಂದ್ರಶೇಖರ […]