60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ: ಕೋವಿಡ್ ಹೆಚ್ಚಳ ಹಿನ್ನೆಲೆ ಮುಂಜಾಗರೂಕತಾ ಕ್ರಮ
ಬೆಂಗಳೂರು: ಕೇರಳದಲ್ಲಿ ಕೋವಿಡ್-19 ಉಪತಳಿ ಜೆಎನ್.1 ಪ್ರಕರಣಗಳ ಹೆಚ್ಚಳ ಭೀತಿಯ ನಡುವೆ, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ಸಹವರ್ತಿ ರೋಗಗಳನ್ನು ಹೊಂದಿರುವವರು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಕೋವಿಡ್-19 ಉಪತಳಿ ಜೆಎನ್.1 ರ ರೋಗಲಕ್ಷಣಗಳನ್ನು ವರದಿ ಮಾಡಿರುವ ಜನರಲ್ಲಿ ಪರೀಕ್ಷೆಗಳನ್ನು ಹೆಚ್ಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಕೇರಳದ ಗಡಿ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರ ಕಣ್ಗಾವಲು ಹೆಚ್ಚಿಸಿದೆ ಎಂದು ಸಚಿವರು ಮಾಹಿತಿ ನೀಡಿದರು. ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದ್ದು, ಸದ್ಯಕ್ಕೆ […]