ಜಮ್ಮು-ಕಾಶ್ಮೀರದಲ್ಲಿ ಭೀಕರ ಸ್ಫೋಟ; ಇಬ್ಬರು ಅಧಿಕಾರಿಗಳು ಸೇರಿ 9 ಮಂದಿ ಮೃತ್ಯು.

ಶ್ರೀನಗರ, ನ.15: ಜಮ್ಮು ಮತ್ತು ಕಾಶ್ಮೀರದ ನೌಗಮ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ ಒಂಭತ್ತು ಮಂದಿ ಮೃತಪಟ್ಟು, 24ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಮೂವರು ನಾಗರಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡವರನ್ನು ಶ್ರೀನಗರದ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಪೊಲೀಸರು, ವಿಧಿವಿಜ್ಞಾನ ಸಿಬ್ಬಂದಿ ಸೇರಿದ್ದಾರೆ ಎಂದು ಪೊಲೀಸ್ ಮೂಲವನ್ನು ಉಲ್ಲೇಖಿಸಿ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಸ್ಫೋಟದ ತೀವ್ರತೆಯಿಂದ ಠಾಣೆ ಕಟ್ಟಡಕ್ಕೂ ಹಾನಿಯಾಗಿದೆ. ಸ್ಥಳದಲ್ಲೇ ಏಳು ಮೃತದೇಹಗಳು ಪತ್ತೆಯಾಗಿದ್ದು, […]