ವಾರಾಹಿ ಇಲಾಖೆಯಿಂದ ನಿರ್ಮಿಸಲಾದ ರಸ್ತೆ ಕಾಮಗಾರಿಯಲ್ಲಿ ಭಾರಿ ಅವ್ಯವಹಾರ: ಲೋಕಾಯುಕ್ತ ತನಿಖೆಗೆ ಆಗ್ರಹ

ಉಡುಪಿ: ಕೊಕ್ಕರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಟಂಬೈಲು ಪ್ರದೇಶದಲ್ಲಿ ವಾರಾಹಿ ಇಲಾಖೆಯಿಂದ ನಿರ್ಮಾಣಗೊಂಡಿರುವ ರಸ್ತೆ ಕಳಪೆಯಿಂದ ಕೂಡಿದ್ದು, ಈ ಕಾಮಗಾರಿಯಲ್ಲಿ ದೊಡ್ಡ ಮಟ್ಟದ ಅವ್ಯವಹಾರ ನಡೆದಿದೆ. ಕಾಮಗಾರಿಗೆ ₹ 2 ಕೋಟಿ ಪಾವತಿಯಾಗಿದೆ. ಈ ಬಗ್ಗೆ ಲೋಕಾಯುಕ್ತದಿಂದ ಸಮಗ್ರ ತನಿಖೆ ನಡೆಸುವಂತೆ ಸದಸ್ಯ ಜನಾರ್ದನ ತೋನ್ಸೆ ಆಗ್ರಹಿಸಿದರು. ಈ ಕುರಿತಂತೆ ಲೋಕಾಯುಕ್ತಕ್ಕೆ ಪತ್ರ ಬರೆಯಲು ಜಿಪಂ ಸಾಮಾನ್ಯ ಸಭೆಯಲ್ಲಿ ನಿರ್ಧರಿಸಲಾಯಿತು. ಲಾಕ್‍ಡೌನ್ ಅವಧಿಯಲ್ಲಿ ಬೈಂದೂರು ವ್ಯಾಪ್ತಿಯಲ್ಲಿ ಅಕ್ಷರ ದಾಸೋಹ ಯೋಜನೆಯಡಿ ಅಕ್ಕಿ ಮತ್ತು ಬೇಳೆಯನ್ನು ವಿತರಿಸಿರುವಲ್ಲಿ ಅವ್ಯವಹಾರ […]