ಇಂಡೊನೇಷ್ಯಾದಲ್ಲಿ ಭಾರಿ ಭೂಕುಸಿತ: 126 ಮಂದಿ ಸಾವು
ಇಂಡೊನೇಷ್ಯಾ: ಪೂರ್ವ ಇಂಡೊನೇಷ್ಯಾದಲ್ಲಿ ಸಂಭವಿಸಿದ ಪ್ರವಾಹ ಹಾಗೂ ಭೂಕುಸಿತದಿಂದಾಗಿ 126 ಮಂದಿ ಮೃತಪಟ್ಟಿದ್ದು, ಇನ್ನೂ ಹಲವು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಇಂದು ಹೇಳಿದ್ದಾರೆ. ಈ ಪ್ರದೇಶದಲ್ಲಿ ವಿಪರೀತ ಮಳೆಯಾಗುತ್ತಿದ್ದು, ಇದರಿಂದ ರಕ್ಷಣಾ ಕಾರ್ಯಾಚರಣೆಗೆ ತಡೆಯಾಗಿದೆ. ನಾಪತ್ತೆಯಾದವರ ಹುಡುಕಾಟಕ್ಕೆ ಅಡಚಣೆಉಂಟಾಗಿದೆ ಎಂದು ತಿಳಿಸಿದ್ದಾರೆ. ಪ್ರವಾಹದಿಂದಾಗಿ ಇಂಡೊನೇಷ್ಯಾದ ಫ್ಲೋರ್ಸ್ ದ್ವೀಪದಿಂದ ಪೂರ್ವ ಟಿಮೋರ್‌ವರೆಗೆ ವ್ಯಾಪಿಸಿರುವ ದ್ವೀಪಗಳಲ್ಲಿ ತೀವ್ರ ಹಾನಿಯಾಗಿದ್ದು, ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಪೂರ್ವ ಫ್ಲೋರ್ಸ್ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಇಲ್ಲಿ ಈ ವರೆಗೆ 67 […]