ಛತ್ತೀಸ್ ಗಢದಲ್ಲಿ ಕ್ರೈಸ್ತ ಧರ್ಮ ಭಗಿನಿಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ

ಉಡುಪಿ: ಛತ್ತೀಸ್ ಗಢದಲ್ಲಿ ಕ್ರೈಸ್ತ ಧರ್ಮ ಭಗಿನಿಯರನ್ನು ಸುಳ್ಳು ಆರೋಪ ಹೊರಿಸಿ ಮೇಲೆ ಬಂಧಿಸಿರುವ ಹಾಗೂ ದೌರ್ಜನ್ಯ ನಡೆಸಿರುವ ಕ್ರಮವನ್ನು ಖಂಡಿಸಿ ಕಥೊಲಿಕ್ ಸಭಾ ಉಡುಪಿ ಪ್ರದೇಶದ ನೇತೃತ್ವದಲ್ಲಿ ಇತರ ಸಹಭಾಗಿ ಸಂಘಟನೆಗಳ ಸಹಕಾರದೊಂದಿಗೆ ಸೋಮವಾರ ಸಂಜೆ ಉಡುಪಿ ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ನೆರೆದ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಾಮಾಜಿಕ ಚಿಂತಕರಾದ ಗಣನಾಥ್ ಎಕ್ಕಾರ್ ದೇಶದಾದ್ಯಂತ 30000ಕ್ಕೂ ಅಧಿಕ ಕ್ರೈಸ್ತ ಶಿಕ್ಷಣ ಸಂಸ್ಥೆಗಳಿಂದ್ದು 50ಲಕ್ಷ ಜನರು ಅವುಗಳಿಂದ ಪ್ರಯೋಜನ […]